ರಾತ್ರಿ ಮೆಸೇಜ್, ವಿಡಿಯೋ ಕಾಲ್ : ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯ ರಾಬರ್ಟ್ ವಿರುದ್ಧ ಕೇಸ್
ಉಡುಪಿ, ಜೂನ್ 01: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಗಂಭೀರ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರದ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಡಾ. ರಾಬರ್ಟ್ ರೆಬೆಲ್ಲೋ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಮಹಿಳಾ ವೈದ್ಯೆ 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಮೊಬೈಲ್ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರಂತೆ. ಜೊತೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಕರ್ತವ್ಯದ ಸಮಯ ಮತ್ತು ಮುಗಿದ ಮೇಲೆ ರಾತ್ರಿ ಮೆಸೇಜ್ ಮಾಡುತ್ತಾರೆ. ವಿಡಿಯೋ ಕಾಲ್ ಮಾಡಿ ಎಂದು ಕಿರುಕುಳ ನೀಡುತ್ತಿದ್ದಾರೆ ಎನ್ನುವುದಾಗಿ ಮಹಿಳಾ ವೈದ್ಯೆ ದೂರು ದಾಖಲಿಸಿದ್ದಾರೆ. ಕುಂದಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಡಾ. ರಾಬರ್ಟ್ ರೆಬಲ್ ವಿರುದ್ಧ ದೂರು ದಾಖಲಾಗಿದೆ. ಹೀಗಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಉಡುಪಿ: ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು.
ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜಿದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು, ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2 ಡ್ರ್ಯಾಗರ್ ಮತ್ತು 1 ತಲ್ವಾರ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications