ಶೀರೂರು ಶ್ರೀಗಳ ವಕೀಲರಿಂದ ಸ್ಫೋಟಕ ಮಾಹಿತಿ
Recommended Video

ಉಡುಪಿ, ಜುಲೈ 19: ಇಂದು ಬೆಳಿಗ್ಗೆಯಷ್ಟೆ ಮಣಿಪಾಲ ಆಸ್ಪತ್ರೆಯಲ್ಲಿ ಶೀರೂರು ಮಠದ ಶ್ರೀಗಳು ನಿಧನರಾಗಿದ್ದು, ಶ್ರೀಗಳ ಪರ ವಕೀಲ ರವಿಕಿರಣ್ ಮುರುಡೇಶ್ವರ ಅವರು ಶ್ರೀಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.
ಶೀರೂರು ಶ್ರೀಗಳು, ಪಟ್ಟದ ದೇವರ ಹಸ್ತಾಂತರದ ಬಗ್ಗೆ ನ್ಯಾಯಾಲಯದದಲ್ಲಿ ಹೂಡಿದ್ದ ದಾವೆಯ ಪರ ವಾದಿಸುತ್ತಿರುವ ವಕೀಲ ರವಿಕಿರಣ್ ಮುರಡೇಶ್ವರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶೀರೂರು ಶ್ರೀಗಳು 'ತಮ್ಮ ಜೀವಕ್ಕೆ ಅಪಾಯ ಇರುವ ಬಗ್ಗೆ ಮುಂಚೆಯೇ ತಮಗೆ ಹೇಳಿದ್ದರು' ಎಂದಿದ್ದಾರೆ.
'ಜೂನ್ 28 ರಂದು ತಮ್ಮ ಕಚೇರಿಗೆ ಬಂದಿದ್ದ ಶೀರೂರು ಶ್ರೀಗಳು , ಪುತ್ತಿಗೆ ಮಠವನ್ನು ಹೊರತುಪಡಿಸಿ ಉಳಿದ ಆರು ಮಠಗಳ ವಿರುದ್ಧ ಕ್ರಿಮಿನಲ್ ಸಲ್ಲಿಸಲು ತಮಗೆ ಸೂಚನೆ ನೀಡಿದ್ದರು. ಎಂದು ಅವರು ವಕೀಲ ರವಿಕಿರಣ್ ಹೇಳಿದ್ದಾರೆ.

'ಶ್ರೀಗಳು ತಮ್ಮ ಜೀವಕ್ಕೆ ಅಪಾಯವೂ ಆಗಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು ಹಾಗಾಗಿ ಆರೂ ಮಠಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದರು, ಅದರಂತೆ ನಾನು ನಿನ್ನೆಯಷ್ಟೆ ಫಿರ್ಯಾದು ಸಹ ಸಿದ್ಧ ಪಡಿಸಿದ್ದೆ' ಎಂದು ವಕೀಲ ರವಿಕಿರಣ್ ಮಾಹಿತಿ ನೀಡಿದ್ದಾರೆ.
ಶೀರೂರು ಶ್ರೀಗಳ ಸಾವಿನ ಸಮರ್ಪಕ ತನಿಖೆ ಆಗಬೇಕು, ಅವರ ಸಾವಿನ ಕಾರಣ ಬಹಿರಂಗವಾಗಬೇಕು ಅವರ ಹೋರಾಟ ವ್ಯರ್ಥವಾಗಬಾರದು ಎಂದು ರವಿಕರಣ್ ಅವರು ಆಗ್ರಹಿಸಿದ್ದಾರೆ.
ಶೀರೂರು ಶ್ರೀಗಳು ಫುಡ್ಪಾಯಸನ್ಗೆ ಒಳಗಾಗಿದ್ದರು ಎಂದು ವೈದ್ಯರು ಹೇಳಿದ್ದು, ವಿಷಪ್ರಾಶನದ ಶಂಕೆಯನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ವರದಿ ಬಂದ ಬಳಿಕವಷ್ಟೆ ಸಾವಿಗೆ ನಿಖರ ಕಾರಣ ತಿಳಿಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications