ಉಡುಪಿ: ಶಿರೂರು ಮಠಕ್ಕೆ ತಾತ್ಕಾಲಿಕ ಉಸ್ತುವಾರಿ ನೇಮಕ
Recommended Video

ಉಡುಪಿ, ಜುಲೈ 24:ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನಿಂದಾಗಿ ತೆರವಾಗಿರುವ ಶಿರೂರು ಮಠದ ಹೊಣೆಗಾರಿಕೆ ನೋಡಿಕೊಳ್ಳಲು ಉಸ್ತುವಾರಿಯೊಬ್ಬರನ್ನು ನೇಮಿಸಲಾಗಿದೆ.
ಶಿರೂರು ಮಠದ ಮಾಜಿ ಸಿಬ್ಬಂದಿಯಾದ ಸುಬ್ರಮಣ್ಯ ಭಟ್ ಅವರನ್ನು ಮಠದ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಸೋದೆ ಮಠದ ವಿಶ್ವವಲ್ಲಭ ತೀರ್ಥರು ಸುಬ್ರಮಣ್ಯ ಭಟ್ ಅವರನ್ನು ನೇಮಿಸಿದ್ದಾರೆ. ಅವರು ಮಠದದಲ್ಲಿರುವ ಚಿನ್ನಾಭರಣ, ಇತರೆ ಆಸ್ತಿಪಾಸ್ತಿಗಳ ರಕ್ಷಣೆ ಹಾಗೂ ನಿರ್ವಹಣೆಯ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಸದ್ಯ, ಶಿರೂರು ಸ್ವಾಮಿಗಳ ಸಾವಿನ ಕುರಿತ ತನಿಖೆ ನಡೆಯುತ್ತಿದ್ದು, ಮಠವು ಪೊಲೀಸರ ವಶದಲ್ಲಿದೆ. ಹೀಗಾಗಿ ತನಿಖೆ ಮುಗಿಯುವವರೆಗೂ ಯಾರೂ ಆಸ್ತಿಗಳನ್ನು ಮುಟ್ಟುವಂತಿಲ್ಲ.
ಕೇಮಾರು ಸ್ವಾಮೀಜಿಗೆ ಬೆದರಿಕೆ
ಶಿರೂರು ಸ್ವಾಮೀಜಿಗಳ ಅಸಹಜ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿ ತನಿಖೆಗೆ ಒತ್ತಾಯಿಸಿರುವ ಕೇಮಾರು ಸಾಂದೀಪಿನಿ ಮಠದ ಈಶ ವಿಠಲದಾಸ ಸ್ವಾಮೀಜಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಗೂ ನಿಂದನೆಗಳು ಎದುರಾಗಿವೆ.
ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈಶ ವಿಠಲದಾಸ ಸ್ವಾಮೀಜಿ ಅವರ ಕುರಿತು ನಿಂದನಾತ್ಮಕ ಬರಹಗಳನ್ನು ಪ್ರಕಟಿಸಲಾಗುತ್ತಿದೆ.
ವಾಟ್ಸಾಪ್‌ನಲ್ಲಿ ಸಹ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರನ್ನು ಸಂಪರ್ಕಿಸಲಾಗಿದೆ. ಶಿರೂರು ಸ್ವಾಮಿಗಳ ಸಾವಿನ ತನಿಖೆಯ ಭಾಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ನಿಂದನೆಗಳನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.
ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಈಶ ವಿಠಲದಾಸ ಸ್ವಾಮೀಜಿ ಒತ್ತಾಯಿಸಿದ್ದರು.
ಮಠದಲ್ಲಿ ಎಲ್ಲರೂ ಊಟ ಮಾಡಿದ್ದಾರೆ. ಆದರೆ, ಸ್ವಾಮೀಜಿಗಳಿಗೆ ಮಾತ್ರ ಏಕೆ ಫುಡ್ ಪಾಯ್ಸನ್ ಆಗಿದೆ. ವ್ಯಕ್ತಿಗಿಂತ ಪೀಠ ಮುಖ್ಯ. ಅಷ್ಠಮಠಾಧೀಶರಲ್ಲಿ ಒಬ್ಬರಾಗಿದ್ದ ಶಿರೂರು ಶ್ರೀಗಳಿಗೆ ವಿಷ ನೀಡಿದ್ದು ಯಾರು ಎನ್ನುವುದು ತಿಳಿಯಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications