ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫೋನ್ ಕದ್ದಾಲಿಕೆ: ತಪ್ಪು ಮಾಡಿಲ್ಲ ಅಂದ್ರೆ ಭಯ ಯಾಕೆ ? ಶೋಭಾ ಪ್ರಶ್ನೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್ 19: ಫೋನ್ ಕದ್ದಾಲಿಕೆ ಯಾರೇ ಮಾಡಿದರೂ ತಪ್ಪು, ಸಿಬಿಐ ತನಿಖೆಯಿಂದ ಎಲ್ಲಾ ಸತ್ಯಾಂಶ ಹೊರಬರಲಿದೆ. ತಪ್ಪು ಮಾಡಿಲ್ಲ ಎಂದರೆ ಭಯ ಯಾಕೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ,ಕುಮಾರಸ್ವಾಮಿ ಏನೂ ಮಾಡಿಲ್ಲಾಂದ್ರೆ ಖುಷಿಯಾಗಿರಲಿ.ಫೋನ್ ಕದ್ದಾಲಿಕೆ ಯಾರೇ ಮಾಡಿದ್ರೂ ತಪ್ಪು. ಸಿಬಿಐ ತನಿಖೆಯಿಂದ ಎಲ್ಲಾ ಸತ್ಯಾಂಶ ಹೊರಬರಲಿದೆ .ತಪ್ಪು ಮಾಡಿಲ್ಲ ಅಂದ್ರೆ ಯಾರಿಗಾದ್ರು ಅಪರಾಧ ಭಾವನೆ ಯಾಕೆ ? ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ಪ್ರಕರಣ ಬಿಜೆಪಿಗೆ ಸಿಕ್ಕ ಬ್ರಹ್ಮಾಸ್ತ್ರ!ಫೋನ್ ಟ್ಯಾಪಿಂಗ್ ಪ್ರಕರಣ ಬಿಜೆಪಿಗೆ ಸಿಕ್ಕ ಬ್ರಹ್ಮಾಸ್ತ್ರ!

ಸಿದ್ದರಾಮಯ್ಯ ಅವರಿಗೆ ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ಆಗಬೇಕೆಂಬ ಅಪೇಕ್ಷೆ ಇತ್ತು.ಯಾರು ತಪ್ಪು ಮಾಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ.ಒಂದು ವೇಳೆ ಯಾರೂ ತಪ್ಪು ಮಾಡಿಲ್ಲಾಂದ್ರೆ ಇಡೀ ರಾಜ್ಯವೇ ಖುಷಿಪಡುತ್ತದೆ ಎಂದರು.

Shobha Karandlaje Statement Over Phone Tapping

ಸಿಎಂ ಪುತ್ರ ವಿಜಯೇಂದ್ರ ವರ್ಗಾವಣೆ ದಂಧೆ ವಿಚಾರದಲ್ಲಿ ಭಾಗಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,ಈ ಬಗ್ಗೆ ನನಗೇನೂ ಗೊತ್ತೇ ಇಲ್ಲ. ನಾನು ನನ್ನದೇ ಕೆಲಸದಲ್ಲಿದ್ದೇನೆ. ನೆರೆ ಪ್ರವಾಸ, ಪಾರ್ಲಿಮೆಂಟ್ ಓಡಾಟದಲ್ಲಿದ್ದೇನೆ.

ಇದ್ಯಾವುದರ ಬಗ್ಗೆಯೂ ನಾನು ತಲೆ ಕೆಡಿಸಿಕೊಂಡಿಲ್ಲ.ನನ್ನ ಫೋನ್ ಕದ್ದಾಲಿಕೆ ಆದ್ರೆ ಸಮಸ್ಯೆಯಿಲ್ಲ. ಯಾಕೆಂದರೆ ಸಮಾಜ ದ್ರೋಹ, ದೇಶ ದ್ರೋಹದ ಕೆಲಸ ನಾನು ಮಾಡಿಲ್ಲ ಎಂದು ಹೇಳಿದ್ದಾರೆ‌.ರಾಜ್ಯ ಸಚಿವ ಸಂಪುಟ ರಚನೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಶೋಭಾ,ಪಟ್ಟಿಯನ್ನು ಸಿಎಂ ಅವರು ಹೈಕಮಾಂಡಿಗೆ ಕೊಟ್ಟಿದ್ದಾರೆ. ಯಾರು ಸಚಿವರಾಗ್ತಾರೆ, ಆಗಲ್ಲ ಅನ್ನೋ ನಿರ್ಧಾರ ಸಿಎಂ ಮತ್ತು ಹೈಕಮಾಂಡ್ ಮಾಡುತ್ತೆ.

ಕಾಂಗ್ರೆಸ್ ಡಿಲೀಟ್ ಮಾಡಿದ ಟ್ವೀಟ್ ನಲ್ಲಿ ಬಿಎಸ್ವೈ ಬಗ್ಗೆ ಏನಿದು ಪದಪ್ರಯೋಗ? ಕಾಂಗ್ರೆಸ್ ಡಿಲೀಟ್ ಮಾಡಿದ ಟ್ವೀಟ್ ನಲ್ಲಿ ಬಿಎಸ್ವೈ ಬಗ್ಗೆ ಏನಿದು ಪದಪ್ರಯೋಗ?

ನಾಳೆ ಪ್ರಮಾಣವಚನದೊಳಗೆ ಪಟ್ಟಿ ಬರಲಿದೆ ಎಂದು ಹೇಳಿದರು.ಕೇಂದ್ರದಿಂದ ನೆರೆ ಪರಿಹಾರ ಆಧ್ಯಯನ ತಂಡ ಯಾವಾಗ ಬೇಕಾದ್ರು ಬರಬಹುದು ಎಂದ ಅವರು,ಗೃಹ ಸಚಿವರು, ಹಣಕಾಸು ಸಚಿವರು ಈಗಾಗಲೇ ಬಂದು ಹೋಗಿದ್ದಾರೆ. ನಾನು ರಾಜ್ಯ ರಾಜಕಾರಣ ಮಿಸ್ಮಾಡಿಕೊಳ್ಳುತ್ತಿಲ್ಲ. ಸಂಸದೆಯಾಗಿ ನಾನು ಸಂತೋಷವಾಗಿದ್ದೇನೆ ಎಂದು ಹೇಳಿದರು.

English summary
MP Shobha Karandlaje questions that If You are not involved in Phone tapping Why afraid about this issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X