ಎಸ್.ಎಲ್ ಭೈರಪ್ಪರಿಗೆ ಒಲಿದು ಬಂದ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
ಉಡುಪಿ, ಸೆಪ್ಟೆಂಬರ್ 24: ರಾಜ್ಯದ ಹೆಸರಾಂತ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ ಅವರನ್ನು ಪ್ರತಿಷ್ಠಿತ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ-2020 ಕ್ಕೆ ಆಯ್ಕೆ ಮಾಡಲಾಗಿದೆ.
ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್ 10 ರಂದು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೋಟ ಶಿವರಾಮ ಕಾರಂತ ಅವರ ಹೆಸರಿನಲ್ಲಿ ಕೋಟ ಗ್ರಾಮ ಪಂಚಾಯತ್ ವಿವಿಧ ಕ್ಷೇತ್ರಗಳ ಸಾಧಕರಿಗೆ ರಜತ ಪ್ರಶಸ್ತಿಯನ್ನು ನೀಡುತ್ತಿರುವುದು ಇಡೀ ದೇಶದಲ್ಲಿ ಪ್ರಥಮವಾಗಿದೆ.

ಕಳೆದ 15 ವರ್ಷಗಳಿಂದ ಅಂದರೆ 2005 ರಿಂದ ವೀರಪ್ಪ ಮೊಯ್ಲಿ, ನ್ಯಾ.ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ರವಿ ಬೆಳಗೆರೆ, ಡಾ.ಮೋಹನ್ ಆಳ್ವ, ಸಾಲುಮರದ ತಿಮ್ಮಕ್ಕ ಸಹಿತ 15 ಮಂದಿ ಸಾಧಕರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈಗ ಈ ಸಾಧಕರ ಸಾಲಿಗೆ ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರು ಸೇರಲಿದ್ದಾರೆ.
Recommended Video
ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡ್ಲಿ | Oneindia Kannada












Click it and Unblock the Notifications