ಉಡುಪಿ; ಕೋವಿಡ್ ಲಸಿಕೆ ಸಂಗ್ರಹಕ್ಕೆ ಸಿದ್ಧವಾಗಿದೆ ವಿಶೇಷ ಕೊಠಡಿ

ಉಡುಪಿ, ನವೆಂಬರ್ 06: ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಸೋಂಕಿಗೆ ಕೆಲವೇ ದಿನಗಳಲ್ಲಿ ಲಸಿಕೆ ಸಿಗಲಿದೆ. ಲಸಿಕೆಯನ್ನು ಹೇಗೆ ಹಂಚಬೇಕು ಎಂದು ಈಗಾಗಲೇ ಯೋಜನೆ ತಯಾರಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಸಂಗ್ರಹ ಮಾಡಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಕೊರೊನಾ ಸೋಂಕು ಪತ್ತೆಯಾದ ತಕ್ಷಣದಿಂದಲೇ ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ ಪ್ರಯೋಗಗಳು ನಡೆಯುತ್ತಲೇ ಇವೆ. ವಿಶ್ವ ಆರೋಗ್ಯ ಸಂಸ್ಥೆ ಸಹ ಲಸಿಕೆ ಪ್ರಯೋಗದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದೆ. ಪ್ರಸ್ತುತ ಲಸಿಕೆಯ ಪ್ರಯೋಗ ಅಂತಿಮ ಹಂತದಲ್ಲಿದೆ.

ಲಸಿಕೆ ಸಿಕ್ಕ ತಕ್ಷಣ ಅದನ್ನು ಹಂಚಿಕೆ ಮಾಡುವ ಕಾರ್ಯವೂ ಆರಂಭವಾಗಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಸಂಗ್ರಹ ಮಾಡಲು ಅಗತ್ಯವಿರುವ ಲಸಿಕಾ ಕೊಠಡಿ (ವಾಕ್ ಇನ್ ಕೂಲರ್)ಯನ್ನು ಸಂಪೂರ್ಣವಾಗಿ ಸಿದ್ಧಗೊಳಿಸಲಾಗಿದೆ. ಸುಮಾರು 2.28 ಕೋಟಿ ಡೋಸ್ ಲಸಿಕೆಯನ್ನು ಸಂಗ್ರಹಿಸಿಡುವ ಸಾಮರ್ಥ್ಯ ಈ ಕೊಠಡಿಗೆ ಇದೆ.

ಉಡುಪಿ ಜಿಲ್ಲೆಯಲ್ಲಿ ಲಸಿಕೆ ಸಾಗಾಟಕ್ಕೆ 1,324 ವಾಹನಗಳು, 9,370 ಐಸ್ ಪ್ಯಾಕ್‌ಗಳ ವ್ಯವಸ್ಥೆ ಮಾಡಲಾಗಿದ್ದು. ಲಸಿಕೆ ನೀಡಲು ನುರಿತ ಸಿಬ್ಬಂದಿಯನ್ನೂ ಸಹ ಗುರುತಿಸಲಾಗಿದೆ. ಲಸಿಕೆ ಬರುವ ತನಕ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು.

ಎಲ್ಲಿದೆ ಕೋವಿಡ್ ಲಸಿಕೆ ಸಂಗ್ರಹ ಕೊಠಡಿ

ಎಲ್ಲಿದೆ ಕೋವಿಡ್ ಲಸಿಕೆ ಸಂಗ್ರಹ ಕೊಠಡಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ಲಸಿಕೆ ಸಂಗ್ರಹ ಕೊಠಡಿ ಸ್ಥಾಪನೆ ಮಾಡಲಾಗಿದೆ. ಸಂಪೂರ್ಣ ಹವಾನಿಯಂತ್ರಿತ ಕೊಠಡಿ ಇದಾಗಿದ್ದು, ಸುಮಾರು 2.28 ಕೋಟಿ ಡೋಸ್ ಲಸಿಕೆಯನ್ನು ಇಲ್ಲಿ ಸಂಗ್ರಹ ಮಾಡಬಹುದು.

ಯಾವುದೇ ಲಸಿಕೆ ಅಂತಿಮಗೊಂಡಿಲ್ಲ

ಯಾವುದೇ ಲಸಿಕೆ ಅಂತಿಮಗೊಂಡಿಲ್ಲ

ಇಡೀ ವಿಶ್ವದಲ್ಲಿ 248ಕ್ಕೂ ಅಧಿಕ ಲಸಿಕೆ ತಯಾರಿಕಾ ಕಂಪೆನಿಗಳು ಕೋವಿಡ್‌ ಸೋಂಕಿಗೆ ಲಸಿಕೆ ಕಂಡು ಹಿಡಿಯುವ ಸಂಶೋಧನೆಯಲ್ಲಿ ತೊಡಗಿವೆ. 197 ಲಸಿಕೆಗಳು ಪ್ರೀ ಕ್ಲಿನಿಕಲ್, 23 ಲಸಿಕೆಗಳು ಪೇಸ್ 1, 16 ಲಸಿಕೆಗಳು ಫೇಸ್ 1/2, 2 ಲಸಿಕೆಗಳು ಫೇಸ್ 2, 10 ಲಸಿಕೆಗಳು ಫೇಸ್ 3 ರಲ್ಲಿ ಪರೀಕ್ಷೆಗೆ ಒಳಪಟ್ಟಿವೆ. ಇದುವರೆಗೆ ಯಾವುದೇ ಲಸಿಕೆ ಅಂತಿಮಗೊಂಡಿಲ್ಲ.

ಕೋವಿಡ್ ವಾರಿಯರ್ಸ್‌ಗೆ ಮೊದಲು

ಕೋವಿಡ್ ವಾರಿಯರ್ಸ್‌ಗೆ ಮೊದಲು

ಕೇಂದ್ರ ಸರ್ಕಾರ ಈಗಾಗಲೇ ನಿರ್ದೇಶನ ನೀಡಿರುವಂತೆ ಲಸಿಕೆ ಸಿಕ್ಕರೆ ಮೊದಲು ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗಳಿಗೆ ನೀಡಬೇಕಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿ ವೈದ್ಯಕೀಯ ಸೇವೆ ಒದಗಿಸುತ್ತಿರುವ 982 ಖಾಸಗಿ ಸಂಸ್ಥೆಗಳು ಹಾಗೂ 92 ಸರಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ, ವೈದ್ಯರು, ಶುಶ್ರೂಶಕರು, ಲ್ಯಾಬ್ ಟೆಕ್ನೀಷಿಯನ್‌ಗಳು, ಸಹಾಯಕ ಸಿಬ್ಬಂದಿ ಪ್ರತಿಯೊಬ್ಬರ ಡೇಟಾಬೇಸ್‌ ಸಂಗ್ರಹ ಮಾಡಲಾಗುತ್ತಿದೆ.

ತಾಪಮಾನ ಕಾಪಾಡಬೇಕಿದೆ

ತಾಪಮಾನ ಕಾಪಾಡಬೇಕಿದೆ

ಕೋವಿಡ್ ಲಸಿಕೆ ತಯಾರಿಕಾ ಘಟಕದಿಂದ ಆರಂಭಗೊಂಡು, ಸಂಚಾರ ವ್ಯವಸ್ಥೆ, ಲಸಿಕಾ ಸಂಗ್ರಹ ಕೊಠಡಿಯಲ್ಲಿ ಶೇಖರಣೆ ಮತ್ತು ಲಸಿಕೆ ವಿತರಣಾ ಸ್ಥಳಕ್ಕೆ ತಲುಪುವವರೆಗೆ 2 ರಿಂದ 8 ಡಿಗ್ರಿ ವರೆಗಿನ ತಾಪಮಾನ ಕಾಪಾಡುವ ಅಗತ್ಯವಿದೆ. ತಾಪಮಾನ ವ್ಯತ್ಯಯವಾಗದಂತೆ ನಿಗಾ ವಹಿಸಲು ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 77 ಕೋಲ್ಡ್ ಚೈನ್ ಸಿಸ್ಟಂ ಸ್ಥಳಗಳನ್ನು ಗುರುತಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+