ಶನಿವಾರ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ
ಉಡುಪಿ, ಆಗಸ್ಟ್. 25 : ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 26 ರಂದು ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.
ಶ್ರೀಲಂಕಾ ರಾಜಧಾನಿ ಕೊಲೊಂಬೋದಿಂದ ಶುಕ್ರವಾರ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾತ್ರಿ 8.10 ಕ್ಕೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಡೆಪ್ಯುಟಿ ಹೈಕಮಿಷನರ್ ವಿ. ಕೃಷ್ಣಮೂರ್ತಿ ಶ್ರೀಲಂಕಾ ಪ್ರಧಾನಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಮುಂಜಾನೆ, ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ.
ಉಡುಪಿಯಿಂದ ಕಾರಿನ ಮೂಲಕ ಕೊಲ್ಲೂರು ಕ್ಷೇತ್ರಕ್ಕೆ ತೆರಳಲಿರುವ ಅವರು, ಬೆಳಗ್ಗೆ 11.15 ರಿಂದ 1 ಗಂಟೆಯವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.












Click it and Unblock the Notifications