Pejavara Shree: ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ

ಉಡುಪಿ, ಜುಲೈ 10: ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ) ಅವರು ( ಜುಲೈ 08) ಸೋಮವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ ಅವರು ಚಿಕಿತ್ಸೆಗೆ ಸ್ಪಂದಿಸದೇ ಪೇಜಾವರ ಮಠದ ಅತಿಥಿಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟರು ಪತ್ನಿ, ಓರ್ವ ಪುತ್ರ, ಸಹೋದರ ಸಹೋದರಿಯರು ಹಾಗೂ ಅನೇಕ ಮಂದಿ ಶಿಷ್ಯರನ್ನು ಅಗಲಿದ್ದಾರೆ.

Sri Vishwaprasanna Sripada Swamiji s Brother Passed Away

ಜ್ಯೋತಿಷ್ಯ, ವೇದ ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ ಅವರು ಮುಂಬೈ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಅಲ್ಲದೇ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು.

ಅನೇಕ ವರ್ಷಗಳಿಂದ ಕೃಷ್ಣನ ಸೇವೆ ಮಾಡುತ್ತಿರುವ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ ಅವರ ಅಗಲಿಕೆಗೆ ವಿವಿಧ ಮಠಾಧೀಶರು ಸಂತಾಪ ಸೂಚಿಸಿದ್ದು, ದೇವರು ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಎಂದು ಪ್ರಾರ್ಥಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+