• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಂಬಳ ವೀರ ಶ್ರೀನಿವಾಸ ಗೌಡರಿಂದ ಮತ್ತೊಂದು ದಾಖಲೆ ಸೃಷ್ಟಿ

|

ಉಡುಪಿ, ಮಾರ್ಚ್ 29: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಹೊಂದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ದಾಖಲೆ ಬರೆದಿದ್ದಾರೆ.

ಉಡುಪಿ ಜಿಲ್ಲೆಯ ಕಕ್ಕೆಪದವುನಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್ ನಲ್ಲಿ 100 ಮೀಟರ್ ಕ್ರಮಿಸಿ ಹೊಸ ದಾಖಲೆ ನಿರ್ಮಿಸಿದರು.

ಕಳೆದ ವಾರ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.89 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಓಡಿಸಿ ಶ್ರೀನಿವಾಸ ಗೌಡ ದಾಖಲೆ ಮಾಡಿದ್ದರು. ತಮ್ಮದೇ ದಾಖಲೆಯನ್ನು ಭಾನುವಾರ ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದರು.

ಮಿಜಾರು ಪ್ರಸಾದ್ ನಿಲಯದ ಶಕ್ತಿಪ್ರಸಾದ್ ಮಾಲೀಕರಾಗಿರುವ ಕೋಣಗಳನ್ನು ಓಡಿಸಿದ ಶ್ರೀನಿವಾಸಗೌಡ 8.78 ಸೆಕೆಂಡ್ ನಲ್ಲಿ 100 ಮೀಟರ್ ಓಡಿಸಿದ್ದಾರೆ. ಈ ಬಾರಿಯ ಕಂಬಳದ ಋಉತುವಿನಲ್ಲಿ ಅತಿ ಹೆಚ್ಚು ಅಂದರೆ 18 ಪದಕಗಳನ್ನು ಗಳಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ಕಕ್ಕೆಪದವು ಜೋಡುಕರೆ ಕಂಬಳದ ಒಂದೇ ಸ್ಪರ್ಧೆಯಲ್ಲಿ ಶ್ರೀನಿವಾಸ್ ಗೌಡ 6 ಪದಕಗಳನ್ನು ಪಡೆದು ಮತ್ತೊಂದು ಸಾಧನೆ ಮಾಡಿದ್ದಾರೆ.

English summary
Srinivasa Gowda set a new record in the Kakkepadavu in Udupi district runed by 100 meters in 8.78 seconds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X