ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಕೋವಿಡ್ ನಿಯಂತ್ರಣಕ್ಕೆ ಮಹತ್ವದ ನಿರ್ಧಾರ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 31; ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿ ಸಹಿತ ಜನಪ್ರತಿನಿಧಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಸೋಮವಾರ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿರುವ ಗ್ರಾಮಗಳಲ್ಲಿ 50ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿದ್ದರೆ ಅಂತಹ ಗ್ರಾಮಗಳನ್ನು ಬುಧವಾರದಿಂದ ಭಾನುವಾರದವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಉಡುಪಿ; ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಆಕ್ರೋಶ ಉಡುಪಿ; ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಆಕ್ರೋಶ

ಶಾಸಕ ಕೆ. ರಘುಪತಿ ಭಟ್, "ಉಡುಪಿಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದರ ಚಿಕಿತ್ಸೆಗೆ ಇಂಜೆಕ್ಷನ್ ಸೇರಿದಂತೆ ಇತರ ಔಷಧಿಗಳ ಲಭ್ಯತೆ ಇಲ್ಲದೇ ಇರುವುದರಿಂದ ಚಿಕಿತ್ಸೆಗಾಗಿ ಬೇರೆ ಜಿಲ್ಲೆಯನ್ನು ಅವಲಂಬಿಸಬೇಕಾಗಿದೆ" ಎಂದು ಸಭೆಯಲ್ಲಿ ತಿಳಿಸಿದರು. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. ಇಂಜೆಕ್ಷನ್ ಸೇರಿದಂತೆ ಇತರ ಔಷಧಿಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

ಉಡುಪಿ; ಕಠಿಣ ಲಾಕ್‌ಡೌನ್, ಮದುವೆ, ಮೆಹಂದಿ ಕಾರ್ಯಕ್ರಮ ರದ್ದು ಉಡುಪಿ; ಕಠಿಣ ಲಾಕ್‌ಡೌನ್, ಮದುವೆ, ಮೆಹಂದಿ ಕಾರ್ಯಕ್ರಮ ರದ್ದು

Strict Rules In Udupi District Village To Control Covid

ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ತಕ್ಷಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ಪ್ರಸ್ತುತ ವಸ್ತುಸ್ಥಿತಿಗಳ ಬಗ್ಗೆ ಚರ್ಚಿಸಲಾಯಿತು.

ಉಡುಪಿ: ಶೇ.40.83 ತಲುಪಿದ ಕೋವಿಡ್ ಪಾಸಿಟಿವಿಟಿ ರೇಟ್ ಉಡುಪಿ: ಶೇ.40.83 ತಲುಪಿದ ಕೋವಿಡ್ ಪಾಸಿಟಿವಿಟಿ ರೇಟ್

ಸೋಂಕು ಧೃಡಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದವರನ್ನು ಖಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು. ಆಕ್ಸಿಜನ್ ಲಭ್ಯತೆ ಹೆಚ್ಚಿಸುವಂತೆ ತಿಳಿಸಿ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

English summary
Villages in Udupi district which has more than 50 active Covid cases will under complete lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X