ಉಡುಪಿ: ಪರೀಕ್ಷೆ ನಡೆಯುತ್ತಿದ್ದ ವೇಳೆ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು
ಉಡುಪಿ, ಫೆಬ್ರವರಿ 17: ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಎಂದು ಗುರುತಿಸಲಾಗಿದೆ.
ಸತ್ಯಂ ಸುಮನ್ ಮಣಿಪಾಲ ಮಾಹೆ ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದ ಜಿಗಿದು ಸಾವಿಗೆ ಶರಣಾಗಿದ್ದಾನೆ. ಸತ್ಯಂ ಸುಮನ್ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಭಯಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಿಂದ ಅತ್ತಿತ್ತ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸತ್ಯಂ ಸುಮನ್ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಮೂಲಕ ಕಾಪಿ ಮಾಡುವ ವೇಳೆ ಸತ್ಯಂ ಸುಮನ್ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದಾರೆ. ಇದರಿಂದ ಮನನೊಂದು ಆತ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿದೆ.
ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ತಪ್ಪಿದ ಭಾರೀ ಅನಾಹುತ
ಚಿಕ್ಕಮಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಇನ್ನು ಅಪಘಾತದಲ್ಲಿ ಲಾರಿ ಚಾಲಕ ರಾಮು ಎಂಬುವರಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿಯಾಗಿದೆ, ಪರಿಣಾಮ ಸಿಮೆಂಟ್ ಮೂಟೆಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿವೆ ಬಿದ್ದಿವೆ. ಇನ್ನು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )












Click it and Unblock the Notifications