ಐಸಿಬಿಎಫ್ ಸದಸ್ಯರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆ
ಬೈಂದೂರು, ಸೆಪ್ಟೆಂಬರ್ 4: ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಇಂಡಿಯನ್ ಕಮ್ಯುನಿಟಿ ಬೆನ್‌ವೆಲೆಂಟ್ (ಐಸಿಬಿಎಫ್) ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಬ್ರಹ್ಮಣ್ಯ ಅವರು ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ದಂಪತಿಯ ಪುತ್ರ. ಪ್ರಸ್ತುತ ಕತಾರ್ ನ ಗಲ್ಫಾರ್ ಆಲ್ ಮಿಸ್ನಾದ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಬ್ರಹ್ಮಣ್ಯ ಅವರುಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ , ತುಳುಕೂಟ, ಭಾರತೀಯ ಸಾಂಸ್ಕೃತಿಕ ಕೇಂದ್ರ, ಕತಾರ್ ಕರ್ನಾಟಕ ಫ್ರೆಂಡ್ಸ್‌ನ ಸದಸ್ಯರಾಗಿದ್ದಾರೆ.ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗಳು ಸಂದಿವೆ.











Click it and Unblock the Notifications