ಕರ್ನಾಟಕ ಬಂದ್ ಗೆ ಉಡುಪಿ‌ ಜಿಲ್ಲೆಯ 14 ಸಂಘಟನೆಗಳ‌ ಬೆಂಬಲ

ಉಡುಪಿ, ಸೆಪ್ಟೆಂಬರ್ 27: ಸೆಪ್ಟೆಂಬರ್ 28 ರಂದು ನಡೆಯಲಿರುವ ಕರ್ನಾಟಕ ಬಂದ್ ಗೆ ಉಡುಪಿ‌ ಜಿಲ್ಲೆಯ 14 ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಹೇಳಿದರು.

ಕರ್ನಾಟಕ ಬಂದ್ ಸಂಬಂಧ ಶನಿವಾರದಂದು ಸುದ್ದಿಗೋಷ್ಠಿ ನಡೆಸಿದ ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಬಂದ್ ದಿನ ಉಡುಪಿ ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಹಿತ 14 ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು.

ವಿವಿಧ ಸಂಘಟನೆಗಳ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು ಸೋಮವಾರದಂದು ರಸ್ತೆಗಿಳಿಯಲಿದ್ದಾರೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ ತಿದ್ದುಪಡಿ, ವಿದ್ಯುತ್ ಹಾಗೂ ಕಾರ್ಮಿಕ‌ ವಿರೋಧಿ ಕಾಯ್ದೆ ವಿರೋಧಿಸಿ ಬಂದ್ ಗೆ ಸಹಕಾರ ನೀಡಲಿದ್ದೇವೆ ಎಂದು ತಿಳಿಸಿದರು.

Udupi: Support Of 14 Organizations In Udupi District For Karnataka Bandh

ಕಾಂಗ್ರೆಸ್ ಕಿಸಾನ್ ಘಟಕ, ಕರ್ನಾಟಕ ಪ್ರಾಂತ‌ ರೈತ‌ ಸಂಘ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಜನತಾ ದಳ, ದಲಿತ ಸಂಘರ್ಷ ಸಮಿತಿ ಸೇರಿ ಒಟ್ಟು 14 ಸಂಘಟನೆಗಳು ಅಂದಿನ ಕರ್ನಾಟಕ ಬಂದ್ ನ್ನು ಯಶಸ್ವಿಗೊಳಿಸಲಿವೆ ಎಂದು ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಯಾದರೆ ಸೆಪ್ಟೆಂಬರ್ 28 ರಂದು ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Recommended Video

      ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+