ಪೇಜಾವರ ಶ್ರೀಗಳ ಶಿಷ್ಯೆ ತಪೋವನಿ ಮಾತಾಜಿ ನಿಧನ

ಉಡುಪಿ, ಫೆಬ್ರವರಿ 4; ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ ಇಂದು ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ವಿಧಿವಶರಾದರು.

ಮೂಲತಃ ಉಡುಪಿಯವರಾಗಿದ್ದ ತಪೋವನಿ ಮಾತಾಜಿ ಅವರಿಗೆ ಸುಮಾರು 89 ವರ್ಷ ವಯಸ್ಸಾಗಿತ್ತು. ಬಾಲ್ಯದಲ್ಲೇ ಆಧ್ಯಾತ್ಮದ ಸೆಳೆತಕೊಕ್ಕೊಳಗಾಗಿ ಉಡುಪಿಯ ಮಠ ಮತ್ತು ದೇವಾಲಯದ ಪರಿಸರದಲ್ಲೇ ಭಜನೆ, ಪ್ರವಚನ ಸತ್ಸಂಗ ಮೊದಲಾದವುಗಳಲ್ಲಿ ಭಾಗಿಯಾಗುತ್ತಿದ್ದ ಸುಭದ್ರಾ ಮುಂದೆ ಪೇಜಾವರ ಶ್ರೀಗಳಲ್ಲಿ ಮಂತ್ರೋಪದೇಶ ಪಡೆದರು.

ಆಧ್ಯಾತ್ಮ ಸಾಧನೆಗಾಗಿ ಸುಮಾರು 50-60 ವರ್ಷಗಳ ಹಿಂದೆ ಬಹಳ ಕಷ್ಟ ಪಟ್ಟು ಉತ್ತರದ ಹಿಮಾಲಯ ಸೇರಿದ್ದರು. ಹಿಮಾಲಯದ ಗಂಗೋತ್ರಿಯಿಂದಲೂ ಬಹಳ ಎತ್ತರದ ಪ್ರದೇಶ ಪಾಂಡವರು ತಪಸ್ಸಾಚರಿಸಿದ್ದ ತಪೋವನದಲ್ಲಿ ಅತ್ಯಂತ ಪ್ರತಿಕೂಲ ವಾತಾರವರಣದಲ್ಲೂ ನಿರಂತರ ಒಂಭತ್ತು ವರ್ಷಗಳ ಕಾಲ ತಪಸ್ಸಾಚರಿಸಿದ್ದರು . ಈ ಸಾಧನೆಗೈದ ಜಗತ್ತಿನ ಏಕೈಕ ಮಹಿಳೆ ಎನ್ನುವುದು ಹಿಮಾಲಯದ ನೂರಾರು ಸಾಧು ಸಂತರ ಅಭಿಪ್ರಾಯ‌.

ದೀರ್ಘಕಾಲದ ಅನಾರೋಗ್ಯ

ದೀರ್ಘಕಾಲದ ಅನಾರೋಗ್ಯ

ಈ ಸಾಧನೆಯಿಂದಲೇ ಹಿಮಾಲಯ ಪ್ರದೇಶದಲ್ಲಿ ತಪೋವನೀ ಮಾ ಎಂದೇ ಪ್ರಸಿದ್ಧರಾಗಿದ್ದರು. ಆ ಬಳಿಕ ಹಿಮಾಲಯದ ಪ್ರದೇಶದಲ್ಲೇ ಆಶ್ರಮವೊಂದನ್ನು ತೆರೆದು ಸಾಧುಗಳಿಗೆ ಯಾತ್ರಿಗಳಿಗೆ ಊಟೋಪಚಾರ , ಆರೋಗ್ಯ ಸೇವೆಗಳನ್ನು ನಡೆಸುತ್ತಿದ್ದರು. ತೀವ್ರ ಅನಾರೋಗ್ಯಕ್ಕೊಳಗಾದ ಬಳಿಕ ಹರಿದ್ವಾರದ ಆಚಾರ್ಯ ಬಾಲಕೃಷ್ಣ ಅವರ ವಿಶೇಷ ಮುತುವರ್ಜಿಯಲ್ಲಿ ಅಲ್ಲಿನ ರಾಮಕೃಷ್ಣ ಆಶ್ರಮ ಆಸ್ಪತ್ರೆಯಲ್ಲಿ ಅನೇಕ ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಪೇಜಾವರ ಶ್ರೀಗಳ ಸ್ಮರಣೆ

ಪೇಜಾವರ ಶ್ರೀಗಳ ಸ್ಮರಣೆ

ಜೀವನ ಪರ್ಯಂತ ತನ್ನ ಎಲ್ಲಾ ಆಧ್ಯಾತ್ಮಿಕ ಸಾಧನೆಗೆ ಉಡುಪಿ ಕೃಷ್ಣ ಮತ್ತು ಪೇಜಾವರ ಶ್ರೀಗಳೇ ಕಾರಣ ಎಂದೇ ಹಿಮಾಲಯದ ಪ್ರತಿಯೊಬ್ಬರಲ್ಲೂ ತಪೋವನಿ ಮಾತಾಜಿ ಹೇಳಿಕೊಳ್ಳತ್ತಿದ್ದರು. ಅವರ ಆಧ್ಯಾತ್ಮ ಸಾಧನೆಯ ಕುರಿತಾಗಿ ಹಿಂದಿಯಲ್ಲಿ ಪುಸ್ತಕವೊಂದು ಪ್ರಕಟವಾಗಿತ್ತು. ಅದರ ಕನ್ನಡ ಅನುವಾದವನ್ನು ಪ್ರೊ. ಭಾಸ್ಕರ ಮಯ್ಯ ಮಾಡಿದ್ದಾರೆ. ಮಾತಾಜಿಯವರ ಮೂವರು ಸಹೋದರರು ಸದ್ಯ ಉಡುಪಿಯಲ್ಲೇ ಇದ್ದಾರೆ.

ಪುಸ್ತಕ ಬಿಡುಗಡೆ

ಪುಸ್ತಕ ಬಿಡುಗಡೆ

ತಪೋವನಿ ಮಾತಾಜಿ ಅವರ ಪುಸ್ತಕವನ್ನು ನರೇಂದ್ರ ಮತ್ತಿತರರು ಪ್ರಕಟಿಸಿದ್ದರು. ಇತ್ತೀಚೆಗಷ್ಟೇ ಹರಿದ್ವಾರದ ಆಸ್ಪತ್ರೆಯಲ್ಲೇ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಆಚಾರ್ಯ ಬಾಲಕೃಷ್ಣರು ಮಾತಾಜಿ ಸಮ್ಮುಖದಲ್ಲೇ ಆ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

Recommended Video

    ಕೋಟಿ ಕೋಟಿ ದೇಣಿಗೆ ಹರಿದು ಬರ್ತಿದೆ | Oneindia Kannada
    ಪೇಜಾವರ ಕಿರಿಯ ಶ್ರೀ ಸಂತಾಪ

    ಪೇಜಾವರ ಕಿರಿಯ ಶ್ರೀ ಸಂತಾಪ

    ತಪೋವನಿ ಮಾ ನಿಧನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಡುಪಿ ಕೃಷ್ಣ ಮತ್ತು ತಮ್ಮ ಗುರುಗಳಲ್ಲಿ ಅನನ್ಯ ಶ್ರದ್ಧೆ ಭಕ್ತಿಯನ್ನು ಹೊಂದಿದ್ದ ಮಾತಾಜಿಯವರು ಕಠೋರ ಅಧ್ಯಾತ್ಮ ತುಡಿತದಿಂದ ಮಾಡಿದ ಸಾಧನೆ ಮಾದರಿಯಾದುದು. ಅವರ ಆತ್ಮಕ್ಕೆ ಶ್ರೀ ಕೃಷ್ಣನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

    ಬಾಬಾ ರಾಮದೇವ್, ಉಮಾಭಾರತಿ, ಆಚಾರ್ಯ ಬಾಲಕೃಷ್ಣ ಅವರ ನೇತೃತ್ವದಲ್ಲಿ ಹರಿದ್ವಾರ ದಲ್ಲಿರುವ ಮಾತಾಜಿಯವರ ಆಶ್ರಮದಲ್ಲಿ ಶುಕ್ರವಾರ ಅಂತ್ಯಸಂಸ್ಕಾರ ನಡೆಯಲಿದೆ. ಪೇಜಾವರ ಶ್ರೀಗಳ ಮಾರ್ಗದರ್ಶನದಂತೆ ಮಾಧ್ವ ಸಂಪ್ರದಾಯ ಪ್ರಕಾರ ಅಂತಿಮ ವಿಧಿವಿಧಾನಗಳಿಗೆ ವ್ಯವಸ್ಥೆಗೊಳಿಸಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+