ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಉಡುಪಿ, ಸೆಪ್ಟೆಂಬರ್ 20: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಎಂಬಲ್ಲಿನ ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ (59) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ನಿವೃತ್ತಿಯ ಅಂಚಿನಲ್ಲಿದ್ದ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತಿದ್ದರು ಎಂದು ಆರೋಪಿಸಲಾಗಿದೆ.

Teacher Arrested On Charge Of Sexual Harassment To Student In Udupi

ಸಿದ್ಧಾಪುರ ಐರ್ಬೈಲು ನಿವಾಸಿ ಶ್ರೀನಿವಾಸ್ ಜೋಯಿಸ್ ಕಳೆದ ನಾಲ್ಕೆದು ವರ್ಷಗಳಿಂದ ಇಲ್ಲಿ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ಸಮಯಗಳಿಂದ ಶಾಲೆಯ ಏಳೆಂಟು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಕ್ಕಳು ತಮ್ಮ ಪೋಷಕರಲ್ಲಿ ಈ ವಿಚಾರ ತಿಳಿಸಿದ್ದರು. ಪೋಷಕರು ಈ ಕುರಿತು ಶಿಕ್ಷಣ ಇಲಾಖೆಗೆ ದೂರು ನೀಡಿದರು. ಅದರಂತೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್ ಸೆಪ್ಟೆಂಬರ್ 16 ರಂದು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದಾಗ ಆರೋಪಿ ಮುಖ್ಯ ಶಿಕ್ಷಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 18 ರಂದು ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪೋಷಕರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ್ ಜೋಯಿಸ್ ವಿರುದ್ಧ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಜೋಯಿಸ್ ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+