ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಬದಲಾವಣೆ ಮಾಡಬಾರದು; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜುಲೈ 21; "ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು. ಮುಖ್ಯಮಂತ್ರಿ ಬದಲಾವಣೆಗೆ ಪರಿಸ್ಥಿತಿ ಅನುಕೂಲಕರವಾಗಿಲ್ಲ" ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ವಿವಿಧ ಮಠಾಧೀಶರು ಬಿ. ಎಸ್. ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ.

 ಸಿದ್ದರಾಮಯ್ಯನವರು ದೇಣಿಗೆ ಕೊಡಬಾರದು ಎಂದು ಹೇಳಬಾರದಲ್ಲವೇ: ಪೇಜಾವರ ಶ್ರೀಗಳ ವಿಶೇಷ ಸಂದರ್ಶನ ಸಿದ್ದರಾಮಯ್ಯನವರು ದೇಣಿಗೆ ಕೊಡಬಾರದು ಎಂದು ಹೇಳಬಾರದಲ್ಲವೇ: ಪೇಜಾವರ ಶ್ರೀಗಳ ವಿಶೇಷ ಸಂದರ್ಶನ

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಹ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, "ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು" ಎಂದರು.

ಶಿವಮೊಗ್ಗ; ಮಠಾಧೀಶರಿಂದ ಯಡಿಯೂರಪ್ಪ ಪರ ಪತ್ರಿಕಾಗೋಷ್ಠಿ ಶಿವಮೊಗ್ಗ; ಮಠಾಧೀಶರಿಂದ ಯಡಿಯೂರಪ್ಪ ಪರ ಪತ್ರಿಕಾಗೋಷ್ಠಿ

This Is Not Good Time To Change Leadership Says Vishwaprasanna Tirtha Swamiji

"ಮುಖ್ಯಮಂತ್ರಿಗಳ ಬದಲಾವಣೆಗೆ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಕೂಡಾ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ‌‌‌. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ" ಎಂದು ಹೇಳಿದರು.

ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!

"‌‌ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ‌ಆದರೆ ಈ ಹಂತದಲ್ಲಿ ಬದಲಾವಣೆ ಸೂಕ್ತವಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ದೆಹಲಿ ಪ್ರವಾಸ ಕೈಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ಸಚಿವರನ್ನು ಭೇಟಿ ಮಾಡಿದ್ದರು. ಅವರು ದೆಹಲಿಯಿಂದ ವಾಪಸ್ ಆಗುವಾಗಲೇ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಹಬ್ಬಿದೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಜುಲೈ 26ಕ್ಕೆ ಎರಡು ವರ್ಷವಾಗಲಿದೆ. ಅಂದು ಸಂಜೆ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಭಾರೀ ಚರ್ಚೆಗೆ ಕಾರಣವಾಗಿವೆ.

ನಾಯಕತ್ವ ಬದಲಾವಣೆ ಬಳಿಕ ಮುಂದೆ ಏನು? ಎಂಬ ಪ್ರಶ್ನೆಗೆ ಉತ್ತರವಿಲ್ಲ. ಸಿಎಂ ಬದಲಾವಣೆ ಬಗ್ಗೆ ಕರ್ನಾಟಕದಲ್ಲಿ ಇಷ್ಟು ಬೆಳವಣಿಗೆ ನಡೆಯುತ್ತಿದ್ದರೂ ಹೈಕಮಾಂಡ್ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕರ್ನಾಟಕದ ವಿವಿಧ ಮಠಾಧೀಶರು ಬಿ. ಎಸ್. ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ವಿವಿಧ ಕಡೆ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಜುಲೈ 26ರಂದು ಏನಾಗಲಿದೆ? ಎಂದು ಕಾದು ನೋಡಬೇಕಿದೆ.

English summary
This is not good time to change leadership in the Karnataka said Vishwaprasanna Tirtha Swamiji of Udupi Pejawar Mutt. Swamiji made comment on the reports of replace of chief minister B. S. Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X