• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಲ್ಲಿ ಮುಳುಗಿ ಸಾವು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜುಲೈ 3: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ನಿನ್ನೆ ರಾತ್ರಿ ನದಿಯಲ್ಲಿ ಬಲೆ ಬೀಸಿ ಹೋಗಿದ್ದರು. ಇಂದು ಮುಂಜಾನೆ ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಉಡುಪಿಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆಉಡುಪಿಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಈ ಅವಘಡ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿದರೂ ಪ್ರಯೋಜನವಾಗಲಿಲ್ಲ. ಯುವಕರು ಆಗಲೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಮೃತ ಹರ್ಷ ಖಾಸಗಿ ಫೈನಾನ್ಸ್ ಕಂಪೆನಿಯಲ್ಲಿ ರಿಕವರಿ ಕೆಲಸ ಮಾಡಿಕೊಂಡಿದ್ದರೆ, ಕಾರ್ತಿಕ್ ಕೊನೆಯ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Two Youths Drowned In Halekodi River and died, This happened In Barkur, Brahmavara Taluk, Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X