ಆಸ್ಟ್ರೇಲಿಯಾ ಲಿಬರಲ್ ಪಕ್ಷದ ಸಮಿತಿ ಸದಸ್ಯರಾಗಿ ಕನ್ನಡತಿ ಶಿಲ್ಪಾ ಹೆಗ್ಡೆ ಆಯ್ಕೆ
ಉಡುಪಿ, ಫೆಬ್ರವರಿ 19: ಉಡುಪಿ ಮೂಲದ ಕನ್ನಡತಿ ಶಿಲ್ಪಾ ಹೆಗ್ಡೆ (44) ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರ ಲಿಬರಲ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಉಡುಪಿಯ ಪೆರ್ಡೂರು ಮೂಲದ ಶಿಲ್ಪಾ, ಮೋಹನ್ ದಾಸ್ ಹೆಗ್ಡೆ ಹಾಗೂ ಶಶಿಕಲಾ ದಂಪತಿ ಪುತ್ರಿ. ನಿಟ್ಟೆ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಂಗ ಮಾಡಿದ್ದು, ಇಪ್ಪತ್ತು ವರ್ಷದಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಸದ್ಯ ಅಲ್ಲಿನ ಡಿಡಬ್ಲುಎಸ್ ಗ್ಲೋಬಲ್ ಕಂಪನಿ ಐಟಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಲ್ಪಾ ಪತಿ ದಯಾನಂದ್ ಶೆಟ್ಟಿ ಕೂಡ ಆಸ್ಟ್ರೇಲಿಯಾದಲ್ಲಿ ಉದ್ಯಮಿಯಾಗಿದ್ದಾರೆ.
2013ರಲ್ಲಿ ನಡೆದ ಫೆಡರಲ್ ಚುನಾವಣೆಯಲ್ಲಿ ಶಿಲ್ಪಾ ಹೆಗ್ಡೆ ಮೆಲ್ಬರ್ನ್ನ ವಿಲ್ಸ್ನಿಂದ ಚುನಾವಣೆ ಸ್ಪರ್ಧಿಸಿದ್ದರು. ಇದೀಗ ಅವರನ್ನು ಲಿಬರಲ್ ಪಕ್ಷದ ಉನ್ನತ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದ್ದು, ಈ ಸಮಿತಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಮಹಿಳೆ ಎಂದು ಶಿಲ್ಪಾ ಕರೆಸಿಕೊಂಡಿದ್ದಾರೆ.

ಈ ವರ್ಷದ ಕೊನೆಯಲ್ಲಿ ಅಥವಾ 2022ರ ವೇಳೆಗೆ ಆಸ್ಟ್ರೇಲಿಯಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿಲ್ಪಾ, "ಕಾರ್ಯಕಾರಿ ಸಮಿತಿ ಭಾಗವಾಗಿರುವುದಕ್ಕೆ ಸಂತಸವಾಗುತ್ತಿದೆ. ನಮ್ಮ ಪಕ್ಷ ಆಸ್ಟ್ರೇಲಿಯಾದ ವಲಸಿಗ ಸಮುದಾಯದ ಅಭಿವೃದ್ಧಿ ಕುರಿತು ಚಿಂತಿಸಲಿದೆ" ಎಂದಿದ್ದಾರೆ.
Recommended Video
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications