Yediyurappa: ಬಿಎಸ್‌ವೈ ಯಾಕೆ ಈಗಲೂ 'ಕಿಂಗ್'? ಇಲ್ಲಿದೆ ತಾಜಾ ಉದಾಹರಣೆ
ಕರ್ನಾಟಕ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಾಮುಖ್ಯತೆ ಏನು ಎನ್ನುವುದನ್ನು ತಡವಾಗಿ ಅರಿತ ಬಿಜೆಪಿ ಹೈಕಮಾಂಡ್, ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನ್ನಣೆಯನ್ನು ಅವರಿಗೆ ನೀಡುತ್ತಿದೆ. ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯ ಸದಸ್ಯರನ್ನಾಗಿ ಅವರನ್ನು ನೇಮಕ ಮಾಡಿದ್ದಲ್ಲದೇ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚಿನ ಮಹತ್ವವನ್ನೂ ನೀಡುತ್ತಿದೆ.
ರಾಜ್ಯ ರಾಜಕೀಯದಲ್ಲಿ ಯಡಿಯೂರಪ್ಪ ಮತ್ತು ಬಿ.ಎಲ್.ಸಂತೋಷ್ ಎನ್ನುವ ಬಣ ರಾಜಕೀಯದ ಬಗ್ಗೆ ಸುದ್ದಿಯಾಗುತ್ತಿರುವ ಸಂದರ್ಭದಲ್ಲಿ, ಟಿಕೆಟ್ ಹಂಚಿಕೆಯಲ್ಲಿ ಬಿಎಸ್ವೈ ಕೈಮೇಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪ್ರಮುಖವಾಗಿ, ಉತ್ತರ ಕರ್ನಾಟಕದ ಭಾಗದಲ್ಲಿ ಯಡಿಯೂರಪ್ಪನವರ ಅಭ್ಯರ್ಥಿಗಳ ಶಿಫಾರಸಿಗೆ ಮನ್ನಣೆ ಸಿಕ್ಕಿದೆ.

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅದರಲ್ಲಿ ಕಾರ್ಕಳಕ್ಕೆ ಹಾಲೀ ಶಾಸಕರನ್ನು ಬಿಟ್ಟು ಮಿಕ್ಕೆಲ್ಲಾ ಕಡೆ ಹೊಸಬರಿಗೆ ಮಣೆ ಹಾಕಲಾಗಿದೆ. ಅದು ಸ್ಥಳೀಯ ಬಿಜೆಪಿ ಘಟಕದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಉಡುಪಿಯಲ್ಲಿ ರಘುಪತಿ ಭಟ್ ತೀವ್ರ ಬೇಸರಗೊಂಡು ಕಣ್ಣೀರು ಹಾಕಿದ್ದರು.
ರಘುಪತಿ ಭಟ್ ಅವರ ಸುದ್ದಿ ಮಾಧ್ಯಮಗಳಲ್ಲಿ ಮುನ್ನಲೆಗೆ ಬರುತ್ತಿದ್ದಂತೆಯೆ ಮಾಜಿ ಸಿಎಂ
ಯಡಿಯೂರಪ್ಪನವರು ಭಟ್ರಿಗೆ ದೂರವಾಣಿ ಮೂಲಕ ಕರೆ ಮಾಡಿ ಅವರನ್ನು ಸಮಾಧಾನ ಪಡಿಸಿದ್ದಾರೆ. ಬಿಎಸ್ವೈ ಕರೆಗೆ ಓಗೊಟ್ಟು ಭಟ್ರು ಶಾಂತವಾಗಿದ್ದಾರೆ ಎನ್ನುವುದಕ್ಕೆ ಭಟ್ರ ಲೇಟೆಸ್ಟ್ ಮಾಧ್ಯಮಗೋಷ್ಠಿ ಉದಾಹರಣೆಯಾಗಬಲ್ಲದು.

ಮೊಗವೀರ ಸಮುದಾಯದ ಯಶಪಾಲ್ ಸುವರ್ಣ
ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ರಘುಪತಿ ಭಟ್ ಬದಲು ಮೊಗವೀರ ಸಮುದಾಯದ ಯಶಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲಾಗಿತ್ತು. ಜಿಲ್ಲೆಯಲ್ಲಿ ಇಬ್ಬರು ಬ್ರಾಹ್ಮಣ ಸಮುದಾಯದವರಿಗೆ (ಕುಂದಾಪುರದಲ್ಲಿ ಕಿರಣ್ ಕೋಡ್ಗಿ) ಟಿಕೆಟ್ ಬೇಡ ಎನ್ನುವ ಕಾರಣಕ್ಕಾಗಿ ಟಿಕೆಟ್ ಕೈತಪ್ಪಿತ್ತು ಎಂದು ಖುದ್ದು ರಘುಪತಿ ಭಟ್ರೇ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದರು. ಪಕ್ಷದ ನಾಯಕರ ನಡೆಯ ಬಗ್ಗೆ ಬೇಸರ ಹೊರಹಾಕಿದ್ದರು.
ಪಕ್ಷ ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ತಂದಿದೆ
"ನನಗೆ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ನನಗೆ ಬೇಸರವಿಲ್ಲ, ಪಕ್ಷ ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ತಂದಿದೆ"ಎಂದು ರಘುಪತಿ ಭಟ್ ಹೇಳಿದ್ದರು. ಈಗ ತಮಗಾಗಿದ್ದ ಬೇಸರ/ಅವಮಾನದಿಂದ ಹೊರ ಬಂದಿರುವ ರಘುಪತಿ ಭಟ್, ಯಶಪಾಲ ಸುವರ್ಣ ಅವರನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. ರಘುಪತಿ ಭಟ್ರ ಈ ಬದಲಾದ ನಿಲುವಿಗೆ ಯಡಿಯೂರಪ್ಪನವರ ಫೋನ್ ಕರೆ ಕಾರಣ ಎಂದು ಹೇಳಲಾಗುತ್ತಿದೆ.
ಯಡಿಯೂರಪ್ಪನವರ ಫೋನ್ ಕಾಲ್ ವರ್ಕೌಟ್ ಆಗಿದೆ
ಪಕ್ಷದ ನಾಯಕರ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದ ರಘುಪತಿ ಭಟ್ ಒಂದು ಹೆಜ್ಜೆ ಮುಂದೆ ಹೋಗಿ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನುವ ಮಾತು ಕೇಳಿ ಬರುತ್ತಿತ್ತು. ಈಗ ಯಡಿಯೂರಪ್ಪನವರ ಫೋನ್ ಕಾಲ್ ವರ್ಕೌಟ್ ಆಗಿದೆ, ರಘುಪತಿ ಭಟ್ ಅವರು ಉಡುಪಿಯ ಘೋಷಿತ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದಾರೆ ಅಂದರೆ ಅದಕ್ಕೆ ಯಡಿಯೂರಪ್ಪನವರು ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ನಮ್ಮಲ್ಲಿ ಯಾವುದೇ ಟ್ರಬಲ್ ಇಲ್ಲ, ಟ್ರಬಲ್ ಶೂಟರ್ ಕೂಡ ಇಲ್ಲ
"ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನಗೆ ಕರೆ ಮಾಡಿದ್ದರು. ನಮ್ಮಲ್ಲಿ ಯಾವುದೇ ಟ್ರಬಲ್ ಇಲ್ಲ, ಟ್ರಬಲ್ ಶೂಟರ್ ಕೂಡ ಇಲ್ಲ. ಪಕ್ಷ ಕೊಟ್ಟ ಅಭ್ಯರ್ಥಿಯ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ನಮ್ಮ ಗರಡಿಯಲ್ಲೇ ಬೆಳೆದವರು. ನಾನು ಅಭ್ಯರ್ಥಿಯಾದರೆ ಎಷ್ಟು ವೇಗವಾಗಿ ಕೆಲಸ ಮಾಡುತ್ತೇನೋ ಅದೇ ರೀತಿ ಅಭ್ಯರ್ಥಿಯ ಜಯಕ್ಕೂ ಕೆಲಸ ಮಾಡುತ್ತೇನೆ" ಎಂದು ರಘುಪತಿ ಭಟ್ ಹೇಳಿದ್ದಾರೆ. ಅಲ್ಲಿಗೆ ಬೆಟ್ಟದಾಗಿದ್ದ ಉಡುಪಿ ಬಿಜೆಪಿ ಸಮಸ್ಯೆ ಮಂಜಿನಂತೆ ಕರಗಿ ಹೋಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications