Udupi Chikmagalur Lok Sabha Election 2024 Results LIVE: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು
ಉಡುಪಿ/ಚಿಕ್ಕಮಗಳೂರು, ಜೂನ್ 04: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಜೂನ್ 04ರಂದು ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆಗೆ ಈಗಾಗಲೇ ಸಕಲ ಸಿದ್ಧತೆಗಳು ಅಂತಿಮಗೊಂಡಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಯಾರ ಪಾಲು ಎನ್ನುವ ಲೆಕ್ಕಾಚಾರ ಜೋರಾಗಿದೆ. ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಕಣದಲ್ಲಿದ್ದರೆ, ಕಾಂಗ್ರೆಸ್‌ನಿಂದ ಕ್ಷೇತ್ರದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆಯಲ್ಲಿದ್ದಾರೆ.

ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಜಿಲ್ಲೆ ಬರುವುದರಿಂದ ಉಡುಪಿಯಲ್ಲಿ ನಾಲ್ವರು ಬಿಜೆಪಿ ಶಾಸಕರು ಹಾಗೂ ಚಿಕ್ಕಮಗಳೂರಿನ ನಾಲ್ಕೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಯಾರದು ಎಂದು ಊಹಿಸುವುದು ಕಷ್ಟ ಸಾಧ್ಯವಾಗಿದೆ.
ಇಬ್ಬರು ಅಭ್ಯರ್ಥಿಗಳಲ್ಲಿ ಯಾರೇ ಗೆದ್ದರೂ ಅತ್ಯಂತ ಸಣ್ಣ ಮಾರ್ಜಿನ್‌ನಲ್ಲಿ ಗೆಲ್ಲಬಹುದು. ದಾಖಲೆಯ ಗೆಲುವು ಅಥವಾ ದೊಡ್ಡ ಅಂತರದ ಗೆಲವು ಸಿಗುವುದು ಈ ಬಾರಿ ಕಷ್ಟವಾಗಿದೆ. ಒಂದು ಜಿಲ್ಲೆಯ ಒಬ್ಬ ಅಭ್ಯರ್ಥಿ ಲೀಡ್ ಬಂದರೆ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಬ್ಬ ಅಭ್ಯರ್ಥಿ ಮುನ್ನೆಡೆ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಬಾರಿ ಜಿದ್ದಾಜಿದ್ದಿಯ ಪೈಪೋಟಿ ಇರಲಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಒನ್ ಇಂಡಿಯಾ ಕನ್ನಡದ ಈ ಪುಟವನ್ನು ಫಾಲೋ ಮಾಡಿ. ಮತ ಏಣಿಕೆ ಆರಂಭದಿಂದ ಅಭ್ಯರ್ಥಿ ಘೋಷಣೆವರೆಗಿನ ಸಂಪೂರ್ಣ ಮಾಹಿತಿ ಈ ಪುಟದಲ್ಲಿ ಲಭ್ಯವಿರಲಿದೆ.
ಕ್ಷಣ ಕ್ಷಣದ ಮಾಹಿತಿ
*ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧೀಕೃತ ಘೋಷಣೆಯೊಂದೇ ಬಾಕಿ ಇದೆ.
*ಸಮಯ 12:15: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 4,03,680 ಲಕ್ಷ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 2,59,917 ಲಕ್ಷ ಮತಗಳನ್ನು ಪಡೆದಿದ್ದಾರೆ. 1,43,763 ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ.
* ಸಮಯ 10:10: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,58,618 ಲಕ್ಷ ಮತಗಳನ್ನು ಪಡೆದು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 95,524 ಮತಗಳನ್ನು ಪಡೆದಿದ್ದು, 63,094 ಮತಗಳ ಅಂತರದಲ್ಲಿ ಹಿನ್ನಡೆ ಕಂಡಿದ್ದಾರೆ.
* ಸಮಯ 9:15: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ 28,670 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಈವರೆಗೂ 16,700 ಮತಗಳನ್ನು ಪಡೆದಿದ್ದಾರೆ.
*ಸಮಯ 8:30: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭಗೊಂಡಿದೆ. ಸದ್ಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
*ಉಡುಪಿ ಜಿಲ್ಲೆಯ ಕಾಪು, ಕಾರ್ಕಳ, ಕುಂದಾಪುರ, ಉಡುಪಿ ವಿಧಾನಸಭೆ ಕ್ಷೇತ್ರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ತರೀಕೆರೆ ಹಾಗೂ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರಗಳನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಒಳಗೊಂಡಿದ್ದು, ಜಿಲ್ಲೆಯ ಕಡೂರು ತಾಲೂಕು ಮಾತ್ರ ಹಾಸನ ಲೋಕಸಭೆ ಕ್ಷೇತ್ರಕ್ಕೆ ಸೇರಿಕೊಂಡಿದೆ.
*ಸಮಯ 8:00: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಸ್ಟ್ರಾಂಗ್ ರೂಂ ಅನ್ನು ಭಾರೀ ಭದ್ರತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸಮ್ಮುಖದಲ್ಲಿ ತೆರೆಯಲಾಗಿದ್ದು, ಮೊದಲು ಅಂಚೆ ಮತ ಎಣಿಕೆ ನಡೆಯಲಿದೆ.












Click it and Unblock the Notifications