• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿ-ಚಿಕ್ಕಮಗಳೂರು ಚುನಾವಣಾ ಕಣ : ಕ್ಷೇತ್ರ ಯಾರಿಗೆ?

|
Google Oneindia Kannada News

ಉಡುಪಿ, ಏಪ್ರಿಲ್ 15 : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣಾ ಕಣ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಜೆಡಿಎಸ್‌ ಜೊತೆಗಿನ ಮೈತ್ರಿ ಕಾಂಗ್ರೆಸ್‌ಗೆ ಯಾವುದೇ ಸಹಕಾರ ನೀಡುವ ಸಾಧ್ಯತೆ ಕಡಿಮೆ ಇದೆ.

ಏಪ್ರಿಲ್ 18ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿ. ರಾಜ್ಯ ಬಿಜೆಪಿ ಘಟಕದಲ್ಲಿ ಟಿಕೆಟ್ ಪಡೆದಿರುವ ಏಕೈಕ ಮಹಿಳೆ. ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಕಣದಲ್ಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪುಟ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅನ್ವಯ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷದ ಬಿಫಾರಂನಿಂದ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದಾರೆ.

ಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ಸಿಎಂಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ಸಿಎಂ

ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಯಾವುದೇ ಶಾಸಕರಿಲ್ಲ. ಕಾಂಗ್ರೆಸ್ ಪಕ್ಷದ ಒಬ್ಬರು ಶಾಸಕರು ಮಾತ್ರ ಇದ್ದಾರೆ. 7 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಬಿಜೆಪಿ ಭದ್ರಕೋಟೆಯಾದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಸಂಸದರ ವಿರುದ್ಧವೇ ಅಸಮಾಧಾನವಿದೆ.....

ಉಡುಪಿ-ಚಿಕ್ಕಮಗಳೂರು:ಕೈ-ಕಮಲವನ್ನು ಕಂಗೆಡಿಸಿದ ನೋಟಾ ಅಭಿಯಾನಉಡುಪಿ-ಚಿಕ್ಕಮಗಳೂರು:ಕೈ-ಕಮಲವನ್ನು ಕಂಗೆಡಿಸಿದ ನೋಟಾ ಅಭಿಯಾನ

ವಿಧಾನಸಭೆ ಬಲಾಬಲ

ವಿಧಾನಸಭೆ ಬಲಾಬಲ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ, ಶೃಂಗೇರಿ.

ಬಿಜೆಪಿ - ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ
ಕಾಂಗ್ರೆಸ್ - ಶೃಂಗೇರಿ
(ಜೆಡಿಎಸ್‌ನ ಯಾವುದೇ ಶಾಸಕರು ಕ್ಷೇತ್ರದಲ್ಲಿಲ್ಲ).

ಹಿಂದಿನ ಚುನಾವಣೆ ಇತಿಹಾಸ

ಹಿಂದಿನ ಚುನಾವಣೆ ಇತಿಹಾಸ

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಪ್ರತಿನಿಧಿಸಿದ್ದ ಕ್ಷೇತ್ರವಿದು. 2012ರಲ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ರಾಜೀನಾಮೆ ನೀಡಿದಾಗ ಉಪ ಚುನಾವಣೆ ಎದುರಾಯಿತು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಜಯಪ್ರಕಾಶ್ ಹೆಗಡೆ ಗೆಲುವು ಸಾಧಿಸಿದರು.

ಜಯಪ್ರಕಾಶ್ ಹೆಗಡೆ ಅವರು ಕ್ಷೇತ್ರದಲ್ಲಿ 2009 ಮತ್ತು 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಸೋತಿದ್ದಾರೆ. ಈಗ ಅವರು ಬಿಜೆಪಿಯಲ್ಲಿದ್ದಾರೆ. 2014ರಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.

ಟಿಕೆಟ್ ಕೊಡಲು ವಿರೋಧ

ಟಿಕೆಟ್ ಕೊಡಲು ವಿರೋಧ

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ದೊಡ್ಡ ಅಭಿಯಾನವೇ ನಡೆದಿತ್ತು. ಆದರೆ, ಹೈಕಮಾಂಡ್ ಅವರನ್ನೇ ಅಭ್ಯರ್ಥಿ ಮಾಡಿದೆ. ಅಭಿಯಾನ ಮಾಡಿದವರು ಚುನಾವಣೆಯಲ್ಲಿ ಅವರಿಗೆ ಮತ ನೀಡುವರೇ? ಎಂದು ಕಾದು ನೋಡಬೇಕಿದೆ.

ಪ್ರಮೋದ್ ಮಧ್ವರಾಜ್ ಅಭ್ಯರ್ಥಿ

ಪ್ರಮೋದ್ ಮಧ್ವರಾಜ್ ಅಭ್ಯರ್ಥಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅನ್ವಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಆದರೆ, ಕ್ಷೇತ್ರದಲ್ಲಿ ಜೆಡಿಎಸ್‌ನ ಯಾವುದೇ ಶಾಸಕರು ಇಲ್ಲ. ಮಾಜಿ ಸಚಿವ, ಉಡುಪಿ ಕ್ಷೇತ್ರದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರೂ ಜೆಡಿಎಸ್ ಬಿ.ಫಾರಂ ಮೂಲಕ ಕಣಕ್ಕಿಳಿದಿದ್ದಾರೆ. ಮೈತ್ರಿ ಚುನಾವಣೆಯಲ್ಲಿ ಸಹಕಾರ ನೀಡಲಿದೆಯೇ?.

2014ರ ಫಲಿತಾಂಶ

2014ರ ಫಲಿತಾಂಶ

2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು 5,81,168 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗಡೆ ಅವರು 3,99,525 ಮತ ಪಡೆದಿದ್ದರು. ಜೆಡಿಎಸ್‌ನಿಂದ ವಿ.ಧನಂಜಯ್ ಕುಮಾರ್ ಅಭ್ಯರ್ಥಿಯಾಗಿದ್ದರು 14,895 ಮತ ಪಡೆದಿದ್ದರು.

English summary
Udupi-Chikmagalur lok sabha seat political picture. Sitting MP Shobha Karandlaje BJP candidate. Former minister Pramod Madhwaraj Congress-JD(S) candidate. Election will be held on April 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X