Udupi: ಉಡುಪಿ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಉಡುಪಿ, ಆಗಸ್ಟ್, 07: ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶ ಹೊರಡಿಸಿದೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ.
— CM of Karnataka (@CMofKarnataka) August 7, 2023
- ಮುಖ್ಯಮಂತ್ರಿ @siddaramaiah pic.twitter.com/3aVKquZYQ6
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣ ಆಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುಮೊಟೋ ಪ್ರಕರಣ ದಾಖಲು
ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ ಹಿನ್ನೆಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು.
ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ 509,204,175,34 ಐಪಿಸಿ ಮತ್ತು 66(ಇ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಸಲಾಗಿತ್ತು. ನಂತರ ನಿರೀಕ್ಷಣಾ ಜಾಮೀನು ಕೋರಿ ವಿದ್ಯಾರ್ಥಿನಿಯರು ನ್ಯಾಯಲಯಕ್ಕೆ ಮನವಿ ಸಲ್ಲಿದ್ದರು. ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ವಿದ್ಯಾರ್ಥಿನಿಯರು ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದರು.
ಹಾಗೆಯೇ ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸಬೇಕು. ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡಬಾರದು ಮತ್ತು ತಲಾ 20,000 ರೂಪಾಯಿ ಮೊತ್ತದ ಬಾಂಡ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶ ನೀಡಿತ್ತು. ಉಡುಪಿಯ ನ್ಯಾಯವಾದಿ ಅಸದುಲ್ಲಾ ಕಟಪಾಡಿ ಅವರು ಆರೋಪಿಗಳ ಪರ ವಾದ ಮಂಡನೆ ಮಾಡಿದ ವಕೀಲರಾಗಿದ್ದಾರೆ.
ಅಲ್ಲದೆ ಪ್ರಕರಣ ತನಿಖಾಧಿಕಾರಿಯನ್ನು ಬದಲಾಯಿಸಿದ್ದು, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದ್ದರು. ಇನ್ನು ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಎರಡು ದಿನ ಭೇಟಿ ನೀಡಿ ತನಿಖೆ ನಡೆಸಿದ್ದರು.
ಆದರೆ, ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಹುನ್ನಾರ ನಡೆಸುತ್ತಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಜೊತೆಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಸರ್ಕಾರವನ್ನು ಒತ್ತಾ












Click it and Unblock the Notifications