ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಮಿಕರನ್ನು ನೋಡಿಕೊಳ್ಳದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕೇಸ್: ಉಡುಪಿ ಜಿಲ್ಲಾಧಿಕಾರಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 12: ಜಿಲ್ಲೆಯಲ್ಲಿದ್ದ ಏಳು ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಿದೆ. ಜಿಲ್ಲೆಯಲ್ಲಿ ಇನ್ನಷ್ಟು ವಲಸೆ ಕಾರ್ಮಿಕರಿದ್ದಾರೆ. ಇಂತಹ ಕಾರ್ಮಿಕರನ್ನು ಎಲ್ಲೆಂದರಲ್ಲಿ ಬಿಟ್ಟು ಹೋದರೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಹಲವಾರು ರಾಜ್ಯಗಳ ಕಾರ್ಮಿಕರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿದ್ದಾರೆ. ಈ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಕೆಲಸವನ್ನು ಕರೆದುಕೊಂಡು ಬಂದ ಗುತ್ತಿಗೆದಾರರೇ ಮಾಡಬೇಕು. ಅಮಾನವೀಯವಾಗಿ ಅವರನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದರೆ ಜಿಲ್ಲಾಡಳಿತ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 ತೆಲಂಗಾಣ ಕಾರ್ಮಿಕರ ಕಾಲ್ನಡಿಗೆ ಪ್ರಯಾಣಕ್ಕೆ ತಡೆ: ಊರಿಗೆ ಕಳಿಸುವ ಭರವಸೆ ನೀಡಿದ ಅಧಿಕಾರಿಗಳು ತೆಲಂಗಾಣ ಕಾರ್ಮಿಕರ ಕಾಲ್ನಡಿಗೆ ಪ್ರಯಾಣಕ್ಕೆ ತಡೆ: ಊರಿಗೆ ಕಳಿಸುವ ಭರವಸೆ ನೀಡಿದ ಅಧಿಕಾರಿಗಳು

Udupi DC Warned Contractors To Take Care Of Labours

ಈ ರೀತಿಯ ಗುತ್ತಿಗೆದಾರರನ್ನು ಪತ್ತೆಹಚ್ಚಲು ಎಲ್ಲಾ ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದೇನೆ. ಬೇರೆ ರಾಜ್ಯದ ಕಾರ್ಮಿಕರು ಉಳಿದುಕೊಂಡಿದ್ದರೆ ಅವರನ್ನು ಗುತ್ತಿಗೆದಾರರೇ ಊರಿಗೆ ಕಳುಹಿಸಿ ಕೊಡಬೇಕು. ಅವರನ್ನು ಕಳುಹಿಸುವವರೆಗೆ ಅವರ ಊಟ-ತಿಂಡಿಯ ವ್ಯವಸ್ಥೆಯನ್ನು ಗುತ್ತಿಗೆದಾರರೇ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

English summary
Udupi DC Jagadish warned contractors to take care of their labours,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X