ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ ರಹಸ್ಯ ಬಯಲು ಮಾಡಿದರೆ ಕಠಿಣ ಕ್ರಮ:ಸುದ್ದಿವಾಹಿನಿಗಳಿಗೆ ಉಡುಪಿ ಡಿಸಿ ಎಚ್ಚರಿಕೆ

|
Google Oneindia Kannada News

ಉಡುಪಿ, ಏಪ್ರಿಲ್ 3:ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ಹೆಚ್ಚಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಜಿದ್ದಿಗೆ ಬಿದ್ದು ಪ್ರಚಾರ ನಡೆಸುತ್ತಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ನಡುವೆ ಜಿಲ್ಲೆಯಲ್ಲಿ ವಿವಿಧ ಖಾಸಗಿ ಟಿವಿ ವಾಹಿನಿಗಳು, ಲೋಕಸಭಾ ಚುನಾವಣೆಯ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ಕಾರ್ಯಕ್ರಮ ನಡೆಸುತ್ತಿವೆ.ನಿಮ್ಮ ಮತ ಯಾರಿಗೆ? ಎಂದು ನೇರವಾಗಿ ಮತದಾರರನ್ನು ಪ್ರಶ್ನಿಸಿ ಅಭಿಪ್ರಾಯ ಸಂಗ್ರಹಿಸಿ ಪ್ರಸಾರ ಮಾಡುತ್ತಿದ್ದು, ಇದು ಚುನಾವಣಾ ಗೋಪ್ಯತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಸಿದ್ದಾರೆ.

 ಉಡುಪಿ-ಚಿಕ್ಕಮಗಳೂರು:ಕೈ-ಕಮಲವನ್ನು ಕಂಗೆಡಿಸಿದ ನೋಟಾ ಅಭಿಯಾನ ಉಡುಪಿ-ಚಿಕ್ಕಮಗಳೂರು:ಕೈ-ಕಮಲವನ್ನು ಕಂಗೆಡಿಸಿದ ನೋಟಾ ಅಭಿಯಾನ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣೆಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಪ್ಸಿಬಾ ರಾಣಿ ಅವರು, ಈ ರೀತಿಯ ಕಾರ್ಯಕ್ರಮಗಳು ಚುನಾವಣಾ ಗೋಪ್ಯತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇಂತಹ ಅಭಿಪ್ರಾಯ ಸಂಗ್ರಹಣೆ ನಡೆಸಿದರೆ ಸಂಬಂಧಪಟ್ಟ ವಾಹಿನಿ ಹಾಗೂ ಸಾರ್ವಜನಿಕರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Udupi DC warns media over conducting opinion poll program

ಜಿಲ್ಲೆಯಲ್ಲಿ ಕೆಲವು ಖಾಸಗಿ ಕಾರ್ಯಕ್ರಮಗಳ ಅಹ್ವಾನ ಪತ್ರಿಕೆಗಳಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಅವರ ಹೆಸರನ್ನು ಯಾವುದೇ ಅನುಮತಿ ಪಡೆಯದೇ ಮುದ್ರಿಸುತ್ತಿದ್ದು, ಸದ್ರಿ ಕಾರ್ಯಕ್ರಮ ಆಯೋಜಕರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ

ಮತದಾರರು ತಮ್ಮ ಮತ ರಹಸ್ಯವನ್ನು ಬಯಲು ಮಾಡುವುದು ಕಳವಳಕಾರಿ. ಕೆಲವು ವಾಹಿನಿಗಳಲ್ಲಿ ಇದು ನೇರವಾಗಿ ಪ್ರಸಾರವಾಗುತ್ತಿದೆ. ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಪ್ರತಿಯೊಬ್ಬ ಅಭ್ಯರ್ಥಿಗೂ ಸಮಾನ ಅವಕಾಶ ನೀಡಲಾಗುತ್ತಿದ್ದು, ಯಾವುದೇ ಒಬ್ಬ ಅಭ್ಯರ್ಥಿ ಅಥವಾ ಪಕ್ಷದ ಪರವಾಗಿ ಅಭಿಪ್ರಾಯ ಸಂಗ್ರಹಣೆ ಹಾಗೂ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಅವರು ಸೂಚಿಸಿದರು.

ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?

ಸಾರ್ವಜನಿಕ ಸಂದರ್ಶನಗಳು ಸಂದರ್ಶನಗಳಾಗಿರಬೇಕೆ ಹೊರತು ಪ್ರಭಾವ ಬೀರುವಂತಿರಬಾರದು ಎಂದು ಹೇಳಿದ ಹೆಪ್ಸಿಬಾ ರಾಣಿ ಅವರು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

English summary
Udupi DC Hephsiba Rani Korlapati has warnned TV channels against conducting opinion polls with direct question regarding candidatescontested in Udupi -Chikkamagaluru Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X