Karnataka Weather: ಬಿಸಿಲ ಝಳ, ಹೀಟ್ ವೇವ್‌ನಿಂದ ಪಾರಾಗಲು ಸಲಹೆಗಳು

ಉಡುಪಿ, ಮಾರ್ಚ್ 12: ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬಿಸಿಲಿನ ಝಳ ಹಾಗೂ ಸೆಕೆ ಹೆಚ್ಚಾಗಿದೆ. ಬೇಸಿಗೆ ಆರಂಭದಲ್ಲೇ ಜನ ಹೈರಾಣಾಗಿ ಹೋಗಿದ್ದಾರೆ. ಕರ್ನಾಟಕದಲ್ಲಿ ಮುಂದಿನ ಕೆಲ ದಿನಗಳ ಕಾಲ ಇದೇ ರೀತಿ ಗರಿಷ್ಠ ತಾಪಮಾನ ಇರುವ ಸಾಧ್ಯತೆ ಹೆಚ್ಚಿದೆ.

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸಲಹೆಗಳನ್ನು ನೀಡಿದೆ.

Udupi District Disaster Management Authority Has Given Some Advice To Public For Survive A Heat Wave

ಉಡುಪಿ ಜಿಲ್ಲೆಯಲ್ಲಿ 32 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಜಿಲ್ಲಾ ಜನತೆ ಬಿಸಿಲು ಹಾಗೂ ಹೀಟ್ ವೇವ್‌ನಿಂದ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಲಹೆಗಳನ್ನು ಈ ಕೆಳಗೆ ನೀಡಲಾಗಿದೆ.

*ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಿ.

*ತೆಳುವಾದ ಸಡಿಲವಾದ ಹತ್ತಿಯ ಉಡುವುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕ ಒಳ್ಳೆಯದು.

* ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಯಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು.

* ಬೆಳಿಗ್ಗೆ 11 ರಿಂದ ಸಂಜೆ 04 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.

*ಸಾಕಷ್ಟು ನೀರು ಕುಡಿಯಿರಿ, ಮಜ್ಜಿ ಮತ್ತು ಸ್ಪೂಕೋಸ್ / (ಓ.ಆರ್.ಎಸ್.) ನಂತಹ ದ್ರವ ಪದಾರ್ಥ ಗಳನ್ನು ಹೆಚ್ಚು ಉಪಯೋಗಿಸಿ.

*ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

*ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ.

*ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‌ಗಳನ್ನು ಮಧ್ಯ ಇಡಬಹುದು.

*ಹೀಟ್ ವೇವ್ ಸ್ಟೋಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

*ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು/ ಓ.ಆರ್.ಎಸ್ /ಮಜ್ಜಿಗೆಯಂತಹ ಪಾನೀಯಗಳನ್ನು ಬಳಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+