ಕೊರೊನಾ ಸಂಕಷ್ಟ: ಉಡುಪಿಯಲ್ಲಿ ಎರಡು ದಿನದಲ್ಲಿ ಮೂವರ ಆತ್ಮಹತ್ಯೆ

ಉಡುಪಿ, ಜೂನ್ 11: ಉಡುಪಿಯಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ನಿಂದಾದ ಆರ್ಥಿಕ ಸಂಕಷ್ಟದಿಂದಾಗಿ ಬೇಸರಗೊಂಡು ಎರಡೇ ದಿನದಲ್ಲಿ ಮೂರು ಜನ ಬಲಿಯಾಗಿದ್ದಾರೆ. ಈ ಮೂವರೂ ಆರ್ಥಿಕ ಸಂಕಷ್ಟವನ್ನು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಕನ್ನರಪಾಡಿ ನಿವಾಸಿ ರಘುನಾಥ್ ಸೇರಿಗಾರ್ ಆತ್ಮಹತ್ಯೆಗೆ ಶರಣಾದವರು. ಟೈಲರ್ ವೃತ್ತಿ ಮಾಡಿಕೊಂಡಿದ್ದ ರಘುನಾಥ್ ಅವರು ಕಳೆದ ಎರಡು ಮೂರು ತಿಂಗಳಿನಿಂದ ಕೆಲಸವಿಲ್ಲದೆ ಮನೆಯಲ್ಲೇ ಇದ್ದರು.

Three People Committed Suicide For Financial Difficulty Due To Coronavirus In Udupi

ಆರ್ಥಿಕವಾಗಿ ಜರ್ಜರಿತರಾಗಿದ್ದ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇಂದು ಬಾವಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಅಗಲಿರುವ ರಘುನಾಥ್ ಅವರ ಕೆಲಸ ಲಾಕ್ ಡೌನ್ ಕಾರಣದಿಂದಾಗಿ ಕಡಿತಗೊಂಡಿತ್ತು.

ಕೆಲಸವಿಲ್ಲದೇ, ಹಣಕಾಸೂ ಇಲ್ಲದೇ ಇದರಿಂದ ಖಿನ್ನತೆಗೆ ಒಳಗಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ನಿನ್ನೆ ಓರ್ವ ಮೀನುಗಾರನೂ ಆರ್ಥಿಕ ಸಂಕಷ್ಟಕ್ಕೀಡಾಗಿ ತನ್ನ ಬೋಟ್ ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿತಲ್ಲಿ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+