ಮೀನುಗಾರಿಕಾ ದೋಣಿ ನಾಪತ್ತೆ : ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ
ಉಡುಪಿ, ಮೇ 03 : ಸುವರ್ಣ ತ್ರಿಭುಜ ದೋಣಿ ನಾಪತ್ತೆ ಪ್ರಕರಣದ ವಿಚಾರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಮಾಹಿತಿ ನೀಡಿದ್ದಾರೆ. ನಾಪತ್ತೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಮೀನುಗಾರಿಕಾ ಇಲಾಖೆಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಈ ಕುರಿತು ಫೇಸ್ಬುಕ್ನಲ್ಲಿ ಸ್ಟೇಟಸ್ ಹಾಕಿದ್ದಾರೆ. ದೋಣಿ ದುರಂತಕ್ಕೆ ಭಾರತೀಯ ನೌಕಾಪಡೆಯ ಯುದ್ಧ ನೌಕೆ ಕಾರಣ ಎಂದು ಅವರು ಆರೋಪ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೂ ಮೊದಲೇ ಈ ಬಗ್ಗೆ ಮೀನುಗಾರರಿಗೆ ಮಾಹಿತಿ ಸಿಕ್ಕಿದ್ದರೂ ಅದನ್ನು ಕೇಂದ್ರ ರಕ್ಷಣಾ ಇಲಾಖೆ ಮತ್ತು ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಮರೆಮಾಚಿ, ಗೌಪ್ಯವಾಗಿ ಇಡುವ ಪ್ರಯತ್ನ ಮಾಡಲಾಗಿತ್ತು ಎಂದು ದೂರಿದ್ದಾರೆ.

ದೇಶದ ಪ್ರಧಾನಮಂತ್ರಿಯವರು ತಕ್ಷಣ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕಾಗಿ ಕರಾವಳಿಯ ಸಮಸ್ತ ಮೀನುಗಾರರು ಮತ್ತು ಅವರ ಕುಟುಂಬದ ಪರವಾಗಿ ಆಗ್ರಹ ಮಾಡುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿ ನಾಯಕರಿಗೆ ಮತ್ತು ಕೇಂದ್ರ ಸರಕಾರಕ್ಕೆ ತಾಕತ್ತಿದ್ದರೆ ಸುಪ್ರೀಂ ಕೊರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಿ ಈ ವಿಚಾರದ ಸತ್ಯಾಸತ್ಯಗಳನ್ನು ಬಹಿರಂಗಪಡಿಸಬೇಕಾಗಿ ನಾನು ಆಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಫೇಸ್ಬುಕ್ ಪೋಸ್ಟ್
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications