ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ 1ರಿಂದ ಉಡುಪಿಯಲ್ಲಿ ಕೃಷ್ಣನ ದರ್ಶನವಿಲ್ಲ

|
Google Oneindia Kannada News

ಉಡುಪಿ, ಮೇ 28 : ಕರ್ನಾಟಕದಲ್ಲಿ ಜೂನ್ 1ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಹಲವು ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ಉಡುಪಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆಯಲು ಇನ್ನೂ ಕೆಲವು ದಿನ ಕಾಯಬೇಕಿದೆ.

Recommended Video

BJP ಅಂಗೈಯಲ್ಲಿ ಅರಮನೆ, ಮಾಯಾ ಬಜಾರ್ ತೋರಿಸಿದ್ದಾರೆ ಎಂದ ಈಶ್ವರ ಖಂಡ್ರೆ | Oneindia Kannada

ರಾಜ್ಯದ ಇತರೆ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿದರೂ ಉಡುಪಿಯಲ್ಲಿ 10 ರಿಂದ 15 ದಿನಗಳ ಬಳಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಈಶಪ್ರಿಯ ಸ್ವಾಮೀಜಿ ಈ ಕುರಿತು ಹೇಳಿಕೆ ನೀಡಿದ್ದಾರೆ.

ಬ್ರೇಕಿಂಗ್ ನ್ಯೂಸ್; ಜೂನ್ 1ರಿಂದ ಬಾಗಿಲು ತೆರೆಯಲಿವೆ ದೇವಾಲಯ ಬ್ರೇಕಿಂಗ್ ನ್ಯೂಸ್; ಜೂನ್ 1ರಿಂದ ಬಾಗಿಲು ತೆರೆಯಲಿವೆ ದೇವಾಲಯ

ಕೋವಿಡ್ - 19 ವಿಶ್ವವನ್ನೇ ತಲ್ಲಣಗೊಳಿಸಿರುವ ಸಂದರ್ಭದಲ್ಲಿ ಭಕ್ತರಿಗೆ ಮಠದ ಒಳಗೆ ಪ್ರವೇಶ ನೀಡಿಲ್ಲ. ಕೇಂದ್ರ ಸರ್ಕಾರ ಮತ್ತು ಉಡುಪಿ ಜಿಲ್ಲಾಡಳಿತ ನೀಡಿದ ಆದೇಶವನ್ನು ಪಾಲಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದ್ದಾರೆ.

ಭಕ್ತರಿಗೆ ಧರ್ಮಸ್ಥಳ ದೇವಾಲಯ ಓಪನ್, ಕಂಡೀಷನ್ ಅಪ್ಲೈ: ಮಹತ್ವದ ಪ್ರಕಟಣೆ ಭಕ್ತರಿಗೆ ಧರ್ಮಸ್ಥಳ ದೇವಾಲಯ ಓಪನ್, ಕಂಡೀಷನ್ ಅಪ್ಲೈ: ಮಹತ್ವದ ಪ್ರಕಟಣೆ

Lock Down Know About Udupi Krishna Temple Darshan

ದೇವಾಲಯಗಳಲ್ಲಿ ಜೂನ್ 1ರಿಂದ ದರ್ಶನಕ್ಕೆ ಅವಕಾಶ ನೀಡಿದರೂ 10-15 ದಿನಗಳ ಬಳಿಕ ಸಂದರ್ಭಾನುಸಾರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಸ್ವಾಮೀಜೀಗಳು ಸ್ಪಷ್ಟಪಡಿಸಿದ್ದಾರೆ.

 ಉಡುಪಿ; ಹೊರ ರಾಜ್ಯ, ದೇಶದಿಂದ ಬಂದವರಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಉಡುಪಿ; ಹೊರ ರಾಜ್ಯ, ದೇಶದಿಂದ ಬಂದವರಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್

ಕೃಷ್ಣ ಭಕ್ತರಿಗೆ ಹೊರಗಿನಿಂದಲೇ ದರ್ಶನ ವ್ಯವಸ್ಥೆ ಇದೆ. ಭಕ್ತರು ಸಹ ಸಹಕಾರ ನೀಡುತ್ತಿದ್ದಾರೆ. ಅಗತ್ಯದ ಸೇವಾ ಪರಿಚಾರಕರು ಮಾತ್ರ ಒಳಗೆ ಇದ್ದು, ಪೂಜೆಗಳು ಸಂಪ್ರದಾಯಬದ್ಧವಾಗಿ ನಡೆಯುತ್ತಿದೆ.

ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಮಠ ಈ ತೀರ್ಮಾನ ಕೈಗೊಂಡಿದೆ. ಭಕ್ತರು ಇದಕ್ಕೆ ಸಹಕಾರ ನೀಡಬೇಕು. ಸದ್ಯಕ್ಕೆ ಜೂನ್ 1ರಿಂದ ದರ್ಶನ ಆರಂಭಿಸುವುದಿಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ಲಾಕ್ ಡೌನ್ ಪರಿಣಾಮ ರಾಜ್ಯದ ಎಲ್ಲಾ ದೇವಾಲಯ, ಚರ್ಚ್, ಮಸೀದಿ ಮುಚ್ಚಲಾಗಿದೆ. ಜೂನ್ 1ರಿಂದ ದೇವಾಲಯಗಳಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

English summary
Muzrai temples in Karnataka to reopen from June 1, 2020. But Udupi Sri Krishna temple will not open for devotees. People to wait 15 more days for darshan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X