Udupi: ಉಡುಪಿಯ ನಾಲ್ವರ ಕೊಲೆಗಳಿಗೆ ಬೆಳಗಾವಿ ನಂಟು- ಪೊಲೀಸ್ ಆಗಿದ್ದ ಹಂತಕ ಪ್ರವೀಣ್
ಉಡುಪಿ, ನವೆಂಬರ್ 15: ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿರುವ ಬಗ್ಗೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್.ಕೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಉಡುಪಿ ಎಸ್.ಪಿ, ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ ಎಂದರು.

ಅವನ ಉದ್ದೇಶ ಅಯ್ನಾಜ್ ಕೊಲೆ ಮಾಡುವುದಾಗಿತ್ತು. ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು. ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ಕೋರ್ಟ್‌ಗೆ ಇವತ್ತೇ ಹಾಜರು ಮಾಡುತ್ತೇವೆ ಎಂದು.
ಮೃತರ ಕುಟುಂಬ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಕೊಲೆಗೆ ಕಾರಣ ಏನು ಎನ್ನುವುದು ಪ್ರಮುಖ. ಅಯ್ನಾಜ್ ಮತ್ತು ಪ್ರವೀಣ್ ಚೌಗುಲೆ ನಡುವಿನ ಸಂಬಂಧಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಎಸ್‌ಪಿ ಡಾ. ಅರುಣ್.ಕೆ ಹೇಳಿದರು.

ಉಡುಪಿ ಜಿಲ್ಲೆಯ ನೇಜಾರಿನಲ್ಲಿ ದೀಪಾವಳಿ ಹಬ್ಬದ ದಿನ ಉಡುಪಿ ಜಿಲ್ಲೆಯ ನೇಜಾರಿನ ಮನೆಗೆ ನುಗ್ಗಿದ ಹಂತಕ ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯ್ನಾಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿದು ಸ್ಥಳದಿಂದ ಪರಾರಿಯಾಗಿದ್ದ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ. ಹಾಜಿರಾ (70) ಗಂಭೀರ ಗಾಯಗೊಂಡಿದ್ದರು.
ಕೊಲೆ ಮಾಡಿ ಆರೋಪಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ಬಂಧಿಸಿದ್ದರು. ಮಹಾರಾಷ್ಟ್ರ ಸಾಂಗ್ಲಿ ಮೂಲದವನಾದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಕ್ರೂ ಆಗಿದ್ದ. ಮೃತ ಅಯ್ನಾಜ್ ಕೂಡ ಕ್ರೂ ಆಗಿದ್ದು, ಆರೋಪಿ ಪ್ರವೀಣ್ ಪರಿಚಯವಾಗಿದ್ದ ಇಬ್ಬರು ಪರಸ್ಪರ ಆತ್ಮೀಯವಾಗಿದ್ದರು ಎನ್ನಲಾಗಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ಅಯ್ನಾಜ್ ಆತನಿಂದ ದೂರವಾಗಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಕೋಪಗೊಂಡಿದ್ದ ಪ್ರವೀಣ್ ಆಕೆಯ ಮನೆಗೆ ನುಗ್ಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆಕೆಯನ್ನು ಕೊಲೆ ಮಾಡಲು ಬಂದ ಆರೋಪಿ ಆಕೆಯನ್ನು ಕಾಪಾಡಲು ಬಂದ ತಾಯಿ, ತಂಗಿ, ಅಜ್ಜಿ ಹಾಗೂ ತಮ್ಮನಿಗೆ ಚಾಕು ಇರಿದಿದ್ದಾನೆ ಎನ್ನಲಾಗುತ್ತಿದೆ.
ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಕಳೆದ 10 ವರ್ಷದಿಂದ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications