ಕೆಎಂಸಿ ಆಸ್ಪತ್ರೆಯಿಂದ ಪೇಜಾವರ ಶ್ರೀ ಡಿಸ್ಚಾರ್ಜ್

Posted By:
Subscribe to Oneindia Kannada

ಉಡುಪಿ, ಅಕ್ಟೋಬರ್ 27 : ಫೆಮರಾಲ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಕೆಎಂಸಿ ಆಸ್ಪತ್ರೆಯಿಂದ ಶುಕ್ರವಾರ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಉಡುಪಿ : ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು

ವೈದ್ಯರು ಚಿಕ್ಕದೊಂದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಈಗ ಯಾವ ನೋವು ಇಲ್ಲ. ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.

Udupi Pejawar seer discharged from Kasturba Hospital

ಮೆಟ್ಟಿಲು ಹತ್ತಬಾರದು, ಭಾರ ಎತ್ತಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಕಾಲ ಪೂಜೆ ಮಾಡಲು ಆಗಲ್ಲ. ಉಳಿದಂತೆ ಎಲ್ಲಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗುತ್ತೇನೆ ಎಂದರು.

86 ವರ್ಷದ ವಿಶ್ವೇಶತೀರ್ಥ ಶ್ರೀಗಳಿಗೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಅಕ್ಟೋಬರ್ 24 (ಬುಧವಾರ) ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Udupi Sri Krishna Mutt's Vishwesha Tirtha Swami discharged from the Kasturba Hospital Manipal on Friday. Pejawar seer admitted to hospital on Oct 24 for stomach pain.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ