ಉಡುಪಿಯಲ್ಲಿ 7 ಕೋಟಿ ವೆಚ್ಚದಲ್ಲಿ ರಂಗಾಯಣ ಕಟ್ಟಡ ನಿರ್ಮಾಣ
ಉಡುಪಿ, ನವೆಂಬರ್ 21 : 'ಉಡುಪಿ ಜಿಲ್ಲೆಯಲ್ಲಿ 7 ಕೋಟಿ ವೆಚ್ಚದಲ್ಲಿ ರಂಗಾಯಣ ಮತ್ತು ರಂಗ ಮಂದಿರ ನಿರ್ಮಾಣ ಕಾರ್ಯ ನಡೆಯಲಿದೆ' ಎಂದು ಸಚಿವೆ ಡಾ.ಜಯಮಾಲಾ ಹೇಳಿದರು.
ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಉಡುಪಿಗೆ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಜಿಲ್ಲೆಯಲ್ಲಿ ರಂಗಾಯಣ ಹಾಗೂ ರಂಗ ಮಂದಿರ ನಿರ್ಮಿಸಲು ಆದಿ ಉಡುಪಿಯಲ್ಲಿ 1.37 ಸೆಂಟ್ಸ್ ಜಾಗವನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ' ಎಂದರು.
'ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಪ್ರಯೋಜನ ಪ್ರತಿ ನಾಗರೀಕರಿಗೂ ದೊರೆಯಬೇಕು, ಜಿಲ್ಲೆಯ ದ್ರವ ಮತ್ತು ಘನ ತ್ಯಾಜ್ಯ ವಿಲೇವಾರಿ ಮಾದರಿ ಇಡೀ ರಾಜ್ಯಕ್ಕೆ ಮಾದರಿಯಗಿದ್ದು, ಬೆಂಗಳೂರಿನಂತಹ ನಗರದಲ್ಲಿ ಇದನ್ನು ಅಳವಡಿಸಿಕೊಂಡರೆ ಕಸದ ಸಮಸ್ಯೆ ಬಗೆಹರಿಯಲಿದೆ' ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಆಯುಷ್ ಆಸ್ಪತ್ರೆ, 4 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹ ಭಾಗಿತ್ವದಲ್ಲಿ ಪ್ರಾರಂಭಿಸಿರುವ ಸಿಟಿ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸಚಿವರು ಉದ್ಘಾಟಿಸಿದರು.
ಎಸ್.ಎಲ್.ಆರ್.ಎಂ ಘಟಕದ ಉದ್ಘಾಟನೆ ಹಾಗೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕಣ್ಣಿನ ಆಪರೇಷನ್ ಘಟಕದ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಮಲ್ಪೆಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಪೋಷಕರಿಗೆ ಸಚಿವರು 5 ಲಕ್ಷ ರೂ ಗಳ ಪರಿಹಾರದ ಚೆಕ್ ವಿತರಿಸಿದರು.












Click it and Unblock the Notifications