ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದವರು ನಾಪತ್ತೆ

|
Google Oneindia Kannada News

ಉಡುಪಿ, ಡಿಸೆಂಬರ್ 24: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಸ್ಟ್ರೇಲಿಯಾ ಬೀಚ್ ನಲ್ಲಿ ಮೂವರು ಭಾರತೀಯರು ನಾಪತ್ತೆ, ಇಬ್ಬರ ಶವ ಪತ್ತೆಆಸ್ಟ್ರೇಲಿಯಾ ಬೀಚ್ ನಲ್ಲಿ ಮೂವರು ಭಾರತೀಯರು ನಾಪತ್ತೆ, ಇಬ್ಬರ ಶವ ಪತ್ತೆ

ಉಡುಪಿಯ ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಎಂಟು ಮಂದಿ ಮೀನುಗಾರರು ಕಳೆದ ಎಂಟು ದಿನಗಳಿಂದ ಬೋಟು ಸಮೇತ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರನ್ನು ಬೋಟ್ ಮಾಲೀಕ ಬಡಾನಿಡಿಯೂರಿನ ಚಂದ್ರ ಶೇಖರ, ಮೀನುಗಾರರಾದ ದಾಮೋದರ, ಲಕ್ಷ್ಮಣ್, ಸತೀಶ್, ರವಿ, ಹರೀಶ್, ರಮೇಶ್, ಜೋಗಯ್ಯ ಎಂದು ಗುರುತಿಸಲಾಗಿದೆ.

ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 15 ಮೀನುಗಾರರನ್ನು ರಕ್ಷಿಸಿದ ಭಾರತೀಯ ತಟರಕ್ಷಣಾ ಪಡೆಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 15 ಮೀನುಗಾರರನ್ನು ರಕ್ಷಿಸಿದ ಭಾರತೀಯ ತಟರಕ್ಷಣಾ ಪಡೆ

ಇವರೆಲ್ಲ ಸುವರ್ಣ ತ್ರಿಭುಜ ಎಂಬ ಮೀನುಗಾರಿಕಾ ಬೋಟಿನಲ್ಲಿ ಡಿಸೆಂಬರ್ 13 ರಂದು ರಾತ್ರಿ 11 ಗಂಟೆಗೆ ಸುಮಾರಿಗೆ ಮಲ್ಪೆಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ಡಿಸೆಂಬರ್ 15ರ ರಾತ್ರಿ 8 ರಿಂದ ಒಂದು ಗಂಟೆಯವರೆಗೆ ಸಂಪರ್ಕದಲ್ಲಿದ್ದ ಇವರು ನಂತರ ಸಂಪರ್ಕ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಕಡಲಬ್ಬರಕ್ಕೆ ಆಳ ಸಮುದ್ರದಲ್ಲೇ ಲಂಗರು ಹಾಕಿದ ಮೀನುಗಾರಿಕಾ ದೋಣಿಗಳುಕಡಲಬ್ಬರಕ್ಕೆ ಆಳ ಸಮುದ್ರದಲ್ಲೇ ಲಂಗರು ಹಾಕಿದ ಮೀನುಗಾರಿಕಾ ದೋಣಿಗಳು

udupis 8 fisherman missing

ನಾಪತ್ತೆಯಾದ ಬೋಟು ಹಾಗೂ ಎಂಟು ಮಂದಿಯನ್ನು ಹುಡುಕಾಡಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
udupi's 8 fisherman missing one who left on December 13 for deepsea for fishing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X