ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಇಬ್ಬರು ಪುತ್ರಿಯರಿಗೆ ಲೈಂಗಿಕ ಹಲ್ಲೆ; ತಂದೆಗೆ ಜೀವಾವಧಿ ಜೈಲು ಶಿಕ್ಷೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್ 30: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಈ ಆದೇಶ ಹೊರಡಿಸಿದ್ದಾರೆ.

ಆರೋಪಿಯ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಕಿರಿಯ ಮಗಳಿಗೆ ಲೈಂಗಿಕ ಹಲ್ಲೆ ನಡೆಸುತ್ತಿದ್ದ. ಹಿರಿಯ ಮಗಳು ಇದಕ್ಕೆ ವಿರೋಧಿಸಿದ್ದಳು. ನಂತರದಲ್ಲಿ ಪತ್ನಿ ಮೃತಳಾಗಿದ್ದು, ಆರೋಪಿ ಮಾತ್ರ ಈ ಚಾಳಿ ಬಿಟ್ಟಿರಲಿಲ್ಲ.

ಉಡುಪಿ: ವಿಕಲಚೇತನ ಯುವತಿಗೆ ಬಾಳ ಸಂಗಾತಿಯಾದ ಯುವಕಉಡುಪಿ: ವಿಕಲಚೇತನ ಯುವತಿಗೆ ಬಾಳ ಸಂಗಾತಿಯಾದ ಯುವಕ

ಸ್ವಂತ ತಂದೆಯೇ 14 ವರ್ಷದ ಮಗಳ ಮೇಲೆ ಲೈಂಗಿಕ ಹಲ್ಲೆ ನಡೆಸಿ, 16 ವರ್ಷದ ಹಿರಿಯ ಮಗಳಿಗೆ ಲೈಂಗಿಕ ದೌರ್ಜನ್ಯವೆಸಗಿದ್ದರ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದಿದ್ದು, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಅವರು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

Udupi: Sexual Assault On Two Daughters: Father Sentenced To Life Imprisonment

2019 ಅಕ್ಟೋಬರ್ ತಿಂಗಳಿನಲ್ಲಿ ಕಾರ್ಕಳ ವೃತ್ತ ಕಚೇರಿ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್‌ ಪ್ರಸಾದ್ ತನಿಖೆ ನಡೆಸಿದ್ದು, ಬಳಿಕ ಸಿಪಿಐ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಒಟ್ಟು 26 ಮಂದಿ ಸಾಕ್ಷಿಗಳ ಪೈಕಿ ಸಂತ್ರಸ್ಥ ಸಹೋದರಿಯರು ಹಾಗೂ ದೂರುದಾರರು ಸೇರಿದಂತೆ 8 ಮಂದಿ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ತಂದೆ ನಡೆಸಿದ ಕೃತ್ಯ ಸಾಬೀತಾಗಿದೆ ಎಂದು ಆದೇಶಿಸಿದೆ.

ಪುತ್ರಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಪೋಕ್ಸೋ ತಿದ್ದುಪಡಿ ಕಾಯ್ದೆ-2019 ರಂತೆ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

15,000 ದಂಡ ಕಟ್ಟದಿದ್ದಲ್ಲಿ 1 ವರ್ಷ ಹೆಚ್ಚುವರಿ ಜೈಲು, ಲೈಂಗಿಕ ಹಲ್ಲೆಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ಕೊಲೆ ಬೆದರಿಕೆಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 1 ನೇ ನೊಂದ ಬಾಲಕಿಗೆ 5 ಲಕ್ಷ ಪರಿಹಾರ ನೀಡಬೇಕು. 2ನೇ ನೊಂದ ಬಾಲಕಿಗೆ 1.5 ಲಕ್ಷ ಪರಿಹಾರವನ್ನು ನೀಡುವಂತೆಯೂ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ವಿಶೇಷ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದಾರೆ.

English summary
Udupi district court has sentenced a father to life imprisonment for sexually assaulting his two daughters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X