ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ: ಹೈಕೋರ್ಟ್ ಅಸಮಾಧಾನ

|
Google Oneindia Kannada News

ಬೆಂಗಳೂರು, ಮೇ 26: ಅಪ್ರಾಪ್ತ ವಯಸ್ಕರನ್ನು ಪೀಠಾಧಿಪತಿಗಳನ್ನಾಗಿ ಮಾಡಿದರೆ ಸರಕಾರ ಸುಮ್ಮನೆ ಕೂರಬಾರದು ಎಂದು ಕರ್ನಾಟಕ ಉಚ್ಚನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಉಡುಪಿ ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿಚಾರದಲ್ಲಿ ಹಿಂದಿನ ಕೃಷ್ಣೈಕ್ಯರಾದ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಮತ್ತು ಶ್ರೀನಿವಾಸ ಆಚಾರ್ಯ ಅವರು, ಹದಿನಾರು ವರ್ಷದ ಬಾಲಕನ್ನು ಪೀಠಾಧಿಪತಿಯನ್ನಾಗಿ ಮಾಡಿದ್ದು ತಪ್ಪು ಎಂದು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಶಿರೂರು ಮಠದಲ್ಲಿ ಪಟ್ಟಾಭಿಷೇಕ; ಧಾರ್ಮಿಕ ಕಾರ್ಯಕ್ರಮ ಆರಂಭಶಿರೂರು ಮಠದಲ್ಲಿ ಪಟ್ಟಾಭಿಷೇಕ; ಧಾರ್ಮಿಕ ಕಾರ್ಯಕ್ರಮ ಆರಂಭ

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ, ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯನ್ನಾಗಿ ಮಾಡಿದ್ದಕ್ಕಾಗಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದೆ.

Udupi Shiroor Math New Pontiff Minor Issue, PIL Adjourned To June 2

"ಅಪ್ರಾಪ್ತ ವಯಸ್ಕನನ್ನು ಸನ್ಯಾಸಿಯಾಗುವಂತೆ ಬಲವಂತ ಮಾಡಿದರೆ, ಅವನ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ. ಮನವಿಯಲ್ಲಿ ಕೆಲವು ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ"ಎಂದು ಹೈಕೋರ್ಟ್ ವಿಭಾಗೀಯ ಪೀಠ ಪ್ರಕರಣದ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲರಾದ ಡಿ.ಆರ್‌. ರವಿಶಂಕರ್‌ ವಾದ ಮಂಡಿಸಿ, 16 ವರ್ಷದ ಬಾಲಕನನ್ನು ಪೀಠಾಧಿ​ಪತಿಯಾಗಿ ನೇಮಕ ಮಾಡಲಾಗಿದೆ. ಬಲವಂತವಾಗಿ ಸನ್ಯಾಸಿ ಮಾಡಲಾಗಿದೆ. ಪ್ರಕರಣದಲ್ಲಿ ಅಪ್ರಾಪ್ತರ ಹಕ್ಕುಗಳ ಉಲ್ಲಂಘನೆಯಾಗಿದೆ ಎನ್ನುವ ವಾದವನ್ನು ಮಂಡಿಸಿದ್ದರು.

Recommended Video

B S Yediyurappa ನವರನ್ನು ಸದ್ಯದಲ್ಲೇ ಕುರ್ಚಿಯಿಂದ ಇಳಿಸಿದ್ದಾರಾ | Oneindia Kannada

ಉಡುಪಿ ಶಿರೂರು ಮಠದ ಯತಿ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನದಿಂದ ಸರಿಸುಮಾರು ಎರಡು ವರ್ಷಗಳಿಂದ ತೆರವಾಗಿರುವ ಶಿರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ವೇದವರ್ಧನ ತೀರ್ಥರನ್ನು ನೇಮಿಸಲಾಗಿತ್ತು.

English summary
Udupi Shiroor Math New Pontiff Minor Issue, PIL Adjourned To June 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X