ಚುನಾವಣೆ ಕಣಕ್ಕಿಳಿದು, ಹಿಂದೆ ಹೆಜ್ಜೆ ಇಟ್ಟಿದ್ದ ಶಿರೂರು ಶ್ರೀಗಳು
ಉಡುಪಿ, ಜುಲೈ 19: ಕರಾವಳಿಯಲ್ಲಿ ಕ್ರಾಂತಿಕಾರಿ ಸಾಮಾಜಿಕ ಬದಲಾವಣೆ ತರುವ ಕನಸು ಹೊತ್ತಿದ್ದ ಶಿರೂರು ಮಠ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ, ಶಾಸಕರಾಗ ಬಯಸಿದ್ದರು. ಆದರೆ, ಕೊನೆಕ್ಷಣದಲ್ಲಿ ಕಣದಿಂದ ಹಿಂದೆ ಸರಿದರು.
ಕರಾವಳಿಯಲ್ಲಿ ಮಠಾಧೀಶರುಗಳ ರಾಜಕೀಯ ಪರ್ವ ಆರಂಭವಾಗಲಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿ ಚುನಾವಣೆ ಪರಿಣಾಮ ಬೀರಬಲ್ಲ ಮಠಮಾನ್ಯಗಳು, ಸ್ವಾಮೀಜಿಗಳನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಮಾತು ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಸಂದರ್ಭದಲ್ಲಿ ಭಾರಿ ಕುತೂಹಲ ಮೂಡಿಸಿತ್ತು.
ಆರೆಸ್ಸೆಸ್, ಬಿಜೆಪಿ ಅಲ್ಲದೆ ಕಾಂಗ್ರೆಸ್ ಕೂಡಾ ಮಠಾಧೀಶರರ ಓಲೈಕೆಯಲ್ಲಿ ತೊಡಗಿತ್ತು. ಖಾವಿಧಾರಿಗಳನ್ನು ಒಲಿಸಿಕೊಂಡು ಮಠದ ಭಕ್ತರ ಓಟುಗಳನ್ನು ಗಿಟ್ಟಿಸಿಕೊಳ್ಳುವುದು ಪಕ್ಷಗಳ ಮುಖ್ಯ ಉದ್ದೇಶವಾಗಿತ್ತು. ಮತ ಬ್ಯಾಂಕಿಗೆ ಅನುಗುಣವಾಗಿ ಎಲ್ಲಾ ಜಾತಿ ವರ್ಗದ ಮಠಾಧೀಶರಿಗೆ ಗಾಳ ಹಾಕಲಾಗಿತ್ತು.

ಆದರೆ, ಶಿರೂರು ಶ್ರೀಗಳು ಯಾವ ಪಕ್ಷದ ಓಲೈಕೆಗೂ ಬಗ್ಗದೆ ಸ್ವತಂತ್ರ ಅಭ್ಯರ್ಥಿಯಾಗಿ ಉಡುಪಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ ಬಯಸಿ, ನಾಮಪತ್ರ ಸಲ್ಲಿಸಿದ್ದರು. ಆದರೆ, ಕೊನೆಕ್ಷಣದಲ್ಲಿ ಶ್ರೀಗಳು ನಾಮಪತ್ರ ಹಿಂಪಡೆಯುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಶ್ರೀಗಳು, 'ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸಿದ್ದೆ. ಆದರೆ, ನನಗೆ ಟಿಕೆಟ್ ಕೊಡಲಿಲ್ಲ. ಬಿಜೆಪಿಯ ಕೇಂದ್ರ ಸಮಿತಿಯ ಸದಸ್ಯರೊಬ್ಬರು ನನ್ನನ್ನು ಸಂಪರ್ಕಿಸಿ, ಬಿಜೆಪಿಯನ್ನು ಬೆಂಬಲಿಸಲು ಕೇಳಿಕೊಂಡರು. ಉಡುಪಿ ಬಿಜೆಪಿಯಲ್ಲಿ ಎಲ್ಲವನ್ನು ಸರಿಪಡಿಸಲಾಗುವುದು, ಅಭಿವೃದ್ಧಿಗೆ ಪೂರಕವಾಗಿ ನಿಮ್ಮ ಬೆಂಬಲ ನೀಡಿ ಎಂದರು. ಪ್ರಧಾನಿ ಮೋದಿ ಅವರು ಉಡುಪಿಗೆ ಭೇಟಿ ನೀಡುವಾಗ ತೊಂದರೆ ಏಕೆ ಎಂದು ನಾನು ಒಪ್ಪಿಕೊಂಡೆ ಎಂದಿದ್ದರು.
ನಾಮಪತ್ರ ಹಿಂತೆಗೆತಕ್ಕೆ ಕಾರಣ ನೀಡಿದ್ದ ಶ್ರೀಗಳು, ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರನ್ನು ಬೆಂಬಲಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅಲ್ಲದೆ, ಮೇ ಒಂದರಂದು ಪ್ರಧಾನಿಯವರು ಉಡುಪಿಗೆ ಬರುತ್ತಿದ್ದಾರೆ. ಅವರು ನಮ್ಮ ಊರಿಗೆ ಬಂದಾಗ ಅವರ ಧ್ಯೇಯ ಮತ್ತು ಚಿಂತನೆಗಳಿಗೆ ತೊಡಕು ಉಂಟು ಮಾಡಬಾರದು ಎಂಬ ಉದ್ದೇಶದಿಂದ ನಾಮಪತ್ರ ಹಿಂದೆಗೆದಿರುವುದಾಗಿ ಸ್ಪಷ್ಟಪಡಿಸಿದ್ದರು.
ಶಿರೂರು ಶ್ರೀಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅವರು ನಂಬುವ ದೈವಗಳೂ ಕೂಡ ಬೇಡ ಎಂದಿದ್ದವು ಎಂಬ ಕುತೂಹಲಕಾರಿ ಅಂಶ ಈಗ ಬೆಳಕಿಗೆ ಬಂದಿದೆ. ಶೀರೂರು ಶ್ರೀಗಳು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ ನಂತರ ತಮ್ಮ ಮಠದಲ್ಲಿ 3 ದಿನಗಳ ದೈವಗಳ ಕೋಲವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಸ್ವಾಮೀಜಿ, ತಾವು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇವೆ. ಗೆಲ್ಲಿಸಿಕೊಡುತ್ತೀರಾ ಎಂದು ದೈವಗಳನ್ನು ಕೇಳಿದ್ದರು. ಅದಕ್ಕೆ ದೈವಗಳು ನೀಡಿದ ಉತ್ತರ ಅಷ್ಟೇನೂ ಆಶಾದಾಯಕವಾಗಿರಲಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications