ಉಡುಪಿ ಎಸ್‌ಪಿ ಅಣ್ಣಾ ಮಲೈ ವರ್ಗಾವಣೆ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಉಡುಪಿ, ಜುಲೈ 26 : ಕರ್ನಾಟಕ ಸರ್ಕಾರ ಮಂಗಳವಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾ ಮಲೈ ಅವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಂಗಳವಾರ ಸಂಜೆ ಈ ಕುರಿತು ಆದೇಶ ಹೊರಬಿದ್ದಿದೆ. ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಚಿಕ್ಕಮಗಳೂರು ಎಸ್‌ಪಿ ಸಂತೋಷ್ ಬಾಬು ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.[24 ಐಎಎಸ್ ಅಧಿಕಾರಿಗಳ ವರ್ಗಾವಣೆ, ಪಟ್ಟಿ ಇಲ್ಲಿದೆ]

SP Annamalai

ಸಂತೋಷ್ ಬಾಬು ಅವರಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾ ಮಲೈ ಅವರನ್ನು ನೇಮಿಸಲಾಗಿದೆ. ಗದಗದ ಎಸ್‌ಪಿ ಕೆ.ಟಿ.ಬಾಲಕೃಷ್ಣ ಅವರನ್ನು ಉಡುಪಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.[ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ಲ: ಎಸ್ಪಿ ಸಂತೋಷ್]

ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಜುಲೈ 22ರಂದು ಟಿ.ವೆಂಕಟೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.[ನಾ ಉಡುಪಿ ಬಿಟ್ಟು ಎಲ್ಲಿಗೂ ಹೋಗೊಲ್ಲ: ಎಸ್ ಪಿ ಅಣ್ಣಾಮಲೈ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka government on July 26, 2016 transferred Udupi SP Annamalai and posted to Chikmagalur district.
Please Wait while comments are loading...