ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಹೋಂ ಕ್ವಾರಂಟೈನ್ ಉಲ್ಲಂಘಿಸುವವರಿಗೆ ಡಿಸಿ ಕೊನೆ ವಾರ್ನಿಂಗ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 26: ವಿದೇಶದಿಂದ ಉಡುಪಿ ಜಿಲ್ಲೆಗೆ ಸುಮಾರು 1000 ಜನರು ಆಗಮಿಸಿ ಈಗಾಗಲೇ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಇತರ ಅಧಿಕಾರಿಗಳು ಸುತ್ತಮುತ್ತಲಿನ ಮನೆಗಳಿಗೆ ನೋಟೀಸ್ ನೀಡುವ ಮೂಲಕ ಮಾಹಿತಿ ನೀಡಿದ್ದಾರೆ. ಅದಲ್ಲದೇ ಅಂಥವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಮನೆಯಿಂದ ಹೊರಗೆ ಬಾರದಂತೆ ವಿನಂತಿಸಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಇಂದು ತಿಳಿಸಿದರು.

ಹೋಮ್ ಕ್ವಾರಂಟೈನ್ ಅವಧಿ ಮುಗಿಯುವ ತನಕ ಕಟ್ಟುನಿಟ್ಟಾಗಿ ಹೊರಗಡೆ ಬರುವಂತಿಲ್ಲ. ಇದನ್ನು ಉಲ್ಲಂಘಿಸಿ ಅಂತಹ ವ್ಯಕ್ತಿಗಳು ಸುತ್ತಾಡುವುದನ್ನು ಯಾರಾದರೂ ಗಮನಿಸಿದರೆ, ಅಕ್ಕಪಕ್ಕದ ಮನೆಯವರು 9480242600 ಸಂಖ್ಯೆಗೆ ದೂರನ್ನು ನೀಡಬಹುದು. ಅಂತಹ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೋಮ್ ಕ್ವಾರಂಟೈನ್ ನಲ್ಲಿರುವವರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

DC Warning To Whom Breaking Home Quarantine Rules In Udupi

 ಮೈಸೂರಿನಲ್ಲಿ ಹೋಂ ಕ್ವಾರೆಂಟೈನ್ ಉಲ್ಲಂಘಿಸಿದ ವ್ಯಕ್ತಿ ಮೇಲೆ ಪ್ರಕರಣ ಮೈಸೂರಿನಲ್ಲಿ ಹೋಂ ಕ್ವಾರೆಂಟೈನ್ ಉಲ್ಲಂಘಿಸಿದ ವ್ಯಕ್ತಿ ಮೇಲೆ ಪ್ರಕರಣ

ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಹೊರಗಡೆ ಬಂದರೆ ಬೇರೆಯವರಿಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಎಲ್ಲರೂ ಕೋವಿಡ್ 19 ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

English summary
DC Jagadish has warned whom breaking home quarantine rules in udupi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X