Udupi Survey: ಬಿಜೆಪಿಗೆ ಬಹುಮತ, ಗೆಲುವಿನ ಸಮೀಪದಲ್ಲೇ ಕಾಂಗ್ರೆಸ್‌ಗೆ ಸೋಲು
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಲೋಕ್ ಪೋಲ್ ಸಂಸ್ಥೆ ಫಲಿತಾಂಶ ಕುರಿತು ಸಮೀಕ್ಷೆ ನಡೆಸಿದೆ. 224 ಕ್ಷೇತ್ರಗಳ ಪೈಕಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಗೆಲುವು, ಯಾರಿಗೆ ಸೋಲು? ಸಮೀಕ್ಷೆ ತಿಳಿಯಿರಿ.
ಬೆಂಗಳೂರು, ಮಾರ್ಚ್ 20: ಕೃಷ್ಣನ ಊರಾಗಿರುವ ಕರಾವಳಿ ಭಾಗದ ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ ಉಡುಪಿ ಕ್ಷೇತ್ರದ ಮುಂಬರುವ ವಿಧಾನಸಭಾ ಚುನಾವಣೆ ಫಲಿತಾಂಶ ಕುರಿತು ಲೋಕ್ ಪೋಲ್ (Lok Poll) ಸಂಸ್ಥೆ ಚುನಾವಣೆ ಪೂರ್ವ ಸಮೀಕ್ಷೆ ನಡೆಸಿದೆ.
ಶಿಕ್ಷಣಕಾಶಿ ಅಂತಲೂ ಹೆಸರು ಮಾಡಿರುವ ಉಡುಪಿ ಮೊದಲ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೆ ಇತ್ತು. ನಂತರ ಅದನ್ನು ಪ್ರತ್ಯೇಕಿಸಲಾಯಿತು. ಈ ಉಡುಪಿ ವಿಧಾನಸಭಾ ಕ್ಷೇತ್ರವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದಾಗಿದೆ. ಎಲ್ಲ ಕಡೆಗಳಂತೆ ಈ ಭಾಗದಲ್ಲೂ ಮುಂಬರಲಿರುವ 2023ರ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಕಾಂಗ್ರೆಸ್ ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಎದುರಾಗುವ ಸಂಭವವೂ ಇದೆ.

ಸದ್ಯ ಉಡುಪಿಯಲ್ಲಿ ಬಿಜೆಪಿಯ ರಘುಪತಿ ಭಟ್ ಹಾಲಿ ಶಾಸಕರಾಗಿದ್ದಾರೆ. ಈ ಮಧ್ಯೆ ಲೋಕ್ ಪೋಲ್ (Lok Poll) ಸಂಸ್ಥೆ ಕೈಗೊಂಡ ಚುನಾವಣೆ ಪೂರ್ವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಸಹ ಇಲ್ಲಿ ಬಹುಮತ ಗಳಿಸುವ ಎಲ್ಲ ಸಾಧ್ಯತೆಗಳು ಇವೆ. ಆದರೆ ಅಂತಿಮವಾಗಿ ಅಧಿಕಾರಕ್ಕೆ ಬರುವ ಪಕ್ಷ ಬಿಜೆಪಿ ಎಂದು ಸಮೀಕ್ಷೆ ತಿಳಿಸುತ್ತಿದೆ.
Constituency name: Udupi (AC No. 120)
— Lok Poll (@LokPoll) March 19, 2023
Candidate Name: K Raghupati Bhat (@RaghupatiBhat)
Bhat's failure to hang on to Billava votes proves costly in Udupi#KarnatakaElections2023 #AssemblyElections2023 #KarnatakaElection #LokPoll #LokpollKarnatakaSurvey pic.twitter.com/vrSAQlsGhS
ಸಮೀಕ್ಷೆ ಪ್ರಕಾರ ಗೆಲುವು ಯಾರಿಗೆ?
ಅಂದರೆ ಈ ಬಾರಿ ಉಡುಪಿಯಲ್ಲಿ ಬಿಜೆಪಿಗೆ ಸುಲಭವಾಗಿ ಗೆಲುವು ಧಕ್ಕುವ ಸಾಧ್ಯತೆ ಕಡಿಮೆ ಎಂದು ತಿಳಿದು ಬರುತ್ತದೆ. ಸಮೀಕ್ಷೆ ಪ್ರಕಾರ ಬಿಜೆಪಿಗೆ ಇಲ್ಲಿ ಶೇ.48 ರಷ್ಟು ಮತಗಳು ಲಭಿಸಿದರೆ, ಕ್ಷೇತ್ರದ ಶೇಕಡಾ 46 ರಷ್ಟು ಮತಗಳು ಕಾಂಗ್ರೆಸ್ ನಾಯಕರ ಪಾಲಾಗಲಿವೆ. ಇತರೆ ಎರಡು ಪಕ್ಷಗಳಿಗೆ ತಲಾ ಶೇಕಡಾ 3ರಷ್ಟು ಮತಗಳು ಬರಲಿವೆ.

ಕೆಲವೇ ಕೆಲವು ಮತಗಳ ಅಂತರದಲ್ಲಿ ಬಿಜೆಪಿಗೆ ಜಯ ಸಾಧಿಸುವ ಸಾಧ್ಯತೆ ಇದ್ದು, ಅತ್ಯಂತ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಸೋಲು ಕಾಣಲಿದೆ ಎಂದು ಸಮೀಕ್ಷೆ ಬಹಿರಂಗ ಮಾಡಿದೆ. ಇದು ಉಭಯ ಪಕ್ಷಗಳ ಅಭ್ಯರ್ಥಿಗಳು ಚುನಾವಣೆ ಸಮೀಪಿಸುತ್ತಿದ್ದಂತೆ ಇನ್ನಷ್ಟು ಸಕ್ರಿಯರಾಗಲು, ಹೆಚ್ಚು ಪ್ರಚಾರ, ಕಾರ್ಯಕ್ರಮ ಕೈಗೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.
ಬಹುಮತಕ್ಕಾಗಿ ಪ್ರಬಲ ನಾಯಕರ ಹುಡುಕಾಟ
ಇನ್ನೂ ಕಾಂಗ್ರೆಸ್‌ನಿಂದ ಕಳೆದ ಬಾರಿ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಯ ರಘುಪತಿ ಭಟ್ ಅವರಿಂದ ಸೋಲು ಕಂಡಿದ್ದರು. ಬಳಿಕ ಅವರು ಬಿಜೆಪಿ ಸೇರ್ಪಡೆಯಾಗಿ ನಿರ್ಮಲಾ ಸೀತಾರಾಮ್ ಅವರಿಂದ ತೆರವಾಗಲಿರುವ ರಾಜ್ಯಸಭಾ ಸದಸ್ಯತ್ವ ದ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಬಾರಿ ಪ್ರಬಲ ನಾಯಕರ ಹುಡುಕಾಟದಲ್ಲಿ ಕಾಂಗ್ರೆಸ್ ಇದೆ.
ಇತ್ತ ಬಿಜೆಪಿಯಿಂದ ರಘುಪತಿ ಭಟ್ ಅವರೇ ಅಂತಿಮ ಎಂದುಕೊಂಡಿದ್ದಾರೆ. ಆದರೆ ಅವರ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಅವರ ಹೇಳಿಕೆಗಳಿಂದಲೇ ಪಕ್ಷದ ವರ್ಚಸ್ಸಿಗೆ ಹೊಡೆತ ಬಿದ್ದಿದೆ ಎಂದು ವಿಶ್ಲೇಷಕರು ಹೇಳುತ್ತಾರೆ. ಹೀಗಾಗಿ ಈ ಬಾರಿ ರಘುಪತಿ ಭಟ್ ಇಲ್ಲವೇ ಹೊಸಬರನ್ನು ತಂದು ನಿಲ್ಲಿಸುವ ಚಿಂತನೆಯಲ್ಲೂ ಬಿಜೆಪಿ ಇದೆ. ಆ ಮೂಲಕ ಮತದಾರರನ್ನು ತನ್ನಲ್ಲಿಯೇ ಸೆಳೆದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿಯದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಬಿಜೆಪಿಯಿಂದ ರಘುಪತಿ ಭಟ್ ಬಿಟ್ಟರೆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ (VHP) ಮುಖಂಡ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್, ಮಾಜಿ ಜಿಲ್ಲಾದ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಟಿಕೆಟ್ ಬಯಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications