ಉಡುಪಿ: ದುರ್ಗಾಂಬಿಕಾ ದೇಗುಲದಲ್ಲಿ ಭಾರೀ ಕಳ್ಳತನ
ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ಗ್ರಾಮದಲ್ಲಿರುವ ಹೇರೂರಿನ ದುರ್ಗಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು ಭಾರೀ ಮೊತ್ತದ ಸೊತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಉಡುಪಿ, ಮಾರ್ಚ್ 29: ಉಡುಪಿ ಜಿಲ್ಲೆಯ ಹೇರೂರಿನ ದುರ್ಗಾಂಬಿಕಾ ದೇವಸ್ಥಾನದಲ್ಲಿ ಭಾರೀ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ಗ್ರಾಮದಲ್ಲಿರುವ ಈ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು ಭಾರೀ ಮೊತ್ತದ ಸೊತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.[ತುಳು ರಂಗಭೂಮಿಯಲ್ಲಿ ಹೊಸ ದಾಖಲೆಗೆ ಕ್ಷಣಗಣನೆ]

ದೇವಸ್ಥಾನದ ಮುಂಭಾಗದ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.[ಉಡುಪಿಯಲ್ಲೂ ನೀರಿಗೆ ಬರ..! ನಾಳೆಯಿಂದ ಎರಡು ದಿನಕ್ಕೊಮ್ಮೆ ನೀರು]

ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.












Click it and Unblock the Notifications