ಶೌಚಾಲಯದಲ್ಲಿ ವಿಡಿಯೋ ಶೂಟ್ ಪ್ರಕರಣ: ಯಶ್‌ಪಾಲ್ ಸುವರ್ಣ ಹೇಳಿದ್ದೇನು?

ಉಡುಪಿಯ ಪ್ರತಿಷ್ಠಿತ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಶೂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್‌ಪಾಲ್ ಸುವರ್ಣ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ.

ವಿದ್ಯಾರ್ಥಿಗಳ ಖಾಸಗಿ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲವನ್ನು ಸೃಷ್ಟಿ ಮಾಡಿದೆ. ಈ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ, 'ಕಾಪು ಮೂಲದ ಜಿಹಾದಿ ಮಹಿಳೆ ಸಂಘಟನೆ ಪ್ರಾರಂಭವಾಗಿದೆ. ಶೌಚಾಲಯದಲ್ಲಿ ತೆಗೆದ ವಿಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ. ಈ ಬಗ್ಗೆ ನನ್ನ ಬಳಿ ಸಾಕ್ಷಿ ಇದೆ. ಇದರ ಹಿಂದ ದೊಡ್ಡ ಷಡ್ಯಂತ್ರವೇ ಇದೆ' ಎಂದು ಹೇಳಿದರು.

Udupi: Toilet video shoot case: What did Yashpal Suvarna say?

ವಿಡಿಯೋ ರೆಕಾರ್ಡ್ ಮಾಡಿದ ವಿದ್ಯಾರ್ಥಿ ಹಿಂದೆ ಯಾರೋ ಇದ್ದಾರೆ. ಆಕೆಯ ಬಳಿ ಮೂರು ಮೊಬೈಲ್ ಇರುವ ಮಾಹಿತಿ ಇದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಯಶ್‌ಪಾಲ್ ಸುವರ್ಣ ಒತ್ತಾಯಿಸಿದರು. ವಿದ್ಯಾರ್ಥಿನಿ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಡುವುದು ಸಣ್ಣ ವಿಚಾರವಲ್ಲ. ನಾಳೆ ಆಕೆ ಯಾರೇ ಬಾಂಬ್ ಕಟ್ಟರೂ ಇಡಬಹುದು. ಈ ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆ ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಉಡುಪಿಯ ಕಾಲೇಜೊಂದರ ಮಹಿಳೆಯರ ಸ್ನಾನಗೃಹದಲ್ಲಿ ಒಂದು ಸಮುದಾಯದ ಮೂವರು ವಿದ್ಯಾರ್ಥಿನಿಯರು ಮೊಬೈಲ್‌ ಕ್ಯಾಮೆರಾ ಅಳವಡಿಸಿ ಇನ್ನೊಂದು ಸಮುದಾಯದ ವಿದ್ಯಾರ್ಥಿನಿಯರ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿದ್ದರು ಎನ್ನುವ ಆರೋಪವಿದೆ.

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮಹಿಳಾ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ಅರೆನಗ್ನ ವಿಡಿಯೋಗಳನ್ನು ಮಾಡಿ ಮುಸ್ಲಿಂ ಗುಂಪುಗಳಿಗೆ ಹರಿದು ಬಿಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಕಾಲೇಜು ಆಡಳಿತ ಮಂಡಳಿಯ ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ವಿಡಿಯೋ ಡಿಲೀಟ್ ಆಗಿದೆಯೆಮದು ಪ್ರಕರಣವನ್ನು ಮುಚ್ಚಿಹಾಕಿದ್ದರು.

ಸದ್ಯ ಆರೋಪಿಗಳಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.

ಕಳೆದೊಂದು ವಾರದ ಹಿಂದೆ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಉಡುಪಿಯ ಪ್ರತಿಷ್ಠಿತ ನೇತ್ರಾ ಜ್ಯೋತಿ ಕಾಲೇಜಿಗೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ನಡೆದ ವೀಡಿಯೋ ಚಿತ್ರೀಕರಣದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ ಮಾಡಲು ಮುಂದಾಗಿದೆ. ಹೀಗಾಗಿ ಇಂದು ಖಾಸಗಿ ಕಾಲೇಜಿಗೆ ಮಹಿಳಾ ಆಯೋಗದ ತಂಡ ಆಗಮಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+