Get Updates
Get notified of breaking news, exclusive insights, and must-see stories!

ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ, ಮಾರ್ಚ್ 19: ಇತ್ತೀಚಿಗೆ ಸಾರ್ವಜನಿಕರು ಕಾನೂನು ಕೈಗೆ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದೆ. ಆರೋಪಿಗಳನ್ನು ತಾವೇ ಪೊಲೀಸರಂತೆ ಶಿಕ್ಷಿಸಿ ಬಳಿಕ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಘಟನೆಗಳು ಹೆಚ್ಚುತ್ತಿದೆ. ಇದೀಗ ಉಡುಪಿಯಲ್ಲೂ ಇಂತಹದ್ದೇ ಘಟನೆ ನಡೆದಿದೆ.

ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹತ್ತಾರು ಜನರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯಿಂದ ಬಂದಿರುವ ಮಹಿಳೆಯು ಬಂದರಿನಲ್ಲಿ ಇತರ ಮಾರಾಟಗಾರರ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಮರಕ್ಕೆ ಕಟ್ಟಿಹಾಕಲಾಗಿದೆ.

Udupi Woman Assaulted and Tied to Tree Over Fish Theft Incident

ಬಳಿಕ ಮಹಿಳೆಯ ಕಪಾಳಕ್ಕೆ ಬಾರಿಸಿ ಅಮಾನವೀಯವಾಗಿ ವರ್ತಿಸಲಾಗಿದೆ. ಈ ಘಟನಾ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು ಯಾರೂ ಕೂಡ ಮಹಿಳೆಯನ್ನು ಬಿಡಿಸುವ ಹಲ್ಲೆಯನ್ನು ತಡೆಯಲು ಮುಂದಾಗಿಲ್ಲ. ಬದಲಿಗೆ ಮಹಿಳೆ ಮೇಲೆ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನಾ ಸಂಬಂಧ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ ಸುಂದರ್‌, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 'ಕೃತ್ಯ, ಆರೋಪ ಏನೇ ಇರಲಿ. ಸಾರ್ವಜನಿಕವಾಗಿ ಆಕೆಗೆ ಶಿಕ್ಷೆ ಕೊಟ್ಟು ಅವಮಾನಿಸಲು ಅವರಿಗೆ ಅಧಿಕಾರ ಕೊಟ್ಟವರು ಯಾರು? ನೂರಾರು ಜನ ಸೇರಿ ಆಕೆಯನ್ನು ಬಿಸಿಲಿನಲ್ಲಿ ಕಟ್ಟಿ ಹಾಕಿ ಕೆನ್ನೆಗೆ ಹೊಡೆದರಲ್ಲ. ಆಕೆಗೇನಾದರೂ ಆಗಿದ್ದರೆ ಯಾರು ಹೊಣೆ' ಎಂದು ಪ್ರಶ್ನಿಸುತ್ತಿದ್ದಾರೆ.

ಇನ್ನು ಘಟನೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಪ್ರತಿಕ್ರಿಯಿಸಿದ್ದು, ಈ ರೀತಿಯ ಘಟನೆ ಖಂಡನೀಯ. ಮಹಿಳೆ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ತಪ್ಪು. ಹಲ್ಲೆ ನಡೆಸುವವರು ಒಂದು ಕಡೆಯಾದರೆ, ಉಳಿದ ನೂರಾರು ಜನ ನಗುತ್ತಾ ನಿಂತಿದ್ದರು. ಯಾರು ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ. ಜನರ ಮನಸ್ಥಿತಿ ಈ ರೀತಿಯಾದರೆ ಕಷ್ಟ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಂದ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾನೂನು ಕ್ರಮಕ್ಕೆ ಸಿಎಂ ಸೂಚನೆ

ಇನ್ನು ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವಿಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Take a Poll

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+