ಶೌಚಗೃಹದಲ್ಲಿ ವಿಡಿಯೋ ಪ್ರಕರಣ: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ – ಜಿ. ಪರಮೇಶ್ವರ್ ಕಿಡಿ
ಉಡುಪಿ ಜುಲೈ 27: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ ಎಂದು ಗೃಹ ಇಲಾಖೆ ಸಚಿವ ಜಿ. ಪರಮೇಶ್ವರ್ ಗುಡುಗಿದ್ದಾರೆ.
ಕಳೆದೊಂದು ವಾರದ ಹಿಂದೆ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಉಡುಪಿಯ ಪ್ರತಿಷ್ಠಿತ ನೇತ್ರಾ ಜ್ಯೋತಿ ಕಾಲೇಜಿಗೆ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರಂ ಭೇಟಿ ನೀಡಿದ್ದಾರೆ. ಈ ಬಗ್ಗೆ ಗೃಹ ಇಲಾಖೆ ಸಚಿವ ಪ್ರತಿಕ್ರಿಯೆ ನೀಡುವ ಮೂಲಕ ಕಿಡಿ ಕಾರಿದ್ದಾರೆ.

ಪೊಲೀಸರಿಗೆ ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಹೇಳಿದ್ದೇನೆ. ಅವರು ದೂರು ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ: ಇಲ್ಲಿಗೆ ಬಂದಿದ್ದಾರೆ ಎಂದು ಪರಮೇಶ್ವರ್ ಕಿಡಿ ಕಾರಿದ್ದಾರೆ.
ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಈ ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಅವರು ಸಸ್ಪೆಂಡ್ ಮಾಡಿದ್ದಾರೆ. ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮಹಿಳಾ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ಅರೆನಗ್ನ ವಿಡಿಯೋಗಳನ್ನು ಮಾಡಿ ಮುಸ್ಲಿಂ ಗುಂಪುಗಳಿಗೆ ಹರಿದು ಬಿಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಕಾಲೇಜು ಆಡಳಿತ ಮಂಡಳಿಯ ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ವಿಡಿಯೋ ಡಿಲೀಟ್ ಆಗಿದೆಯೆಮದು ಪ್ರಕರಣವನ್ನು ಮುಚ್ಚಿಹಾಕಿದ್ದರು.
ಆದರೆ, ಈ ಬಗ್ಗೆ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಾಗಿದೆ.
ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್: ವಿಡಿಯೋ ಮಾಡಿದ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿಗಳಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಸೆಕ್ಷನ್ 509,204,175,34, ಸೇರಿ ವಿವಿಧ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.
ಈ ಮೂಲಕ ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ನಡೆದ ವೀಡಿಯೋ ಚಿತ್ರೀಕರಣದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ ಮಾಡಲು ಮುಂದಾಗಿದೆ. ಹೀಗಾಗಿ ಇಂದು ಖಾಸಗಿ ಕಾಲೇಜಿಗೆ ಮಹಿಳಾ ಆಯೋಗದ ತಂಡ ಆಗಮಿಸಿದ್ದರು.












Click it and Unblock the Notifications