ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ; ಪ್ರಮೋದ್ ಮಧ್ವರಾಜ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ.11: "ಬಿಜೆಪಿಯ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ಭಾರತೀಯ ಜನತಾ ಪಕ್ಷ ಯಾವುದೇ ಭರವಸೆಗಳನ್ನು ಕೊಟ್ಟಿಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ನಾನು ಬಿಜೆಪಿಯಲ್ಲಿ ದುಡಿಯುತ್ತೇನೆ" ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮಾಜಿ ಸಚಿವ, ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಪಕ್ಷ ಸೇರ್ಪಯಾದ ಬಳಿಕ ಉಡುಪಿಯಲ್ಲಿ ಮಂಗಳವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಶಾಲು ಹಾಕಿ ಸ್ವಾಗತಿಸಿದರು. ಪಕ್ಷ ಸೇರ್ಪಡೆ ಬಗ್ಗೆ ಮಾತನಾಡಿದ ಪ್ರಮೋದ್ ಮಧ್ವರಾಜ್, "ಕಾಗ್ರೆಸ್‌ನಲ್ಲಿ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವ ಕಾರ್ಯವೈಖರಿ ಮೆಚ್ಚಿ ಬಿಜೆಪಿ ಸೇರುತ್ತಿದ್ದೇನೆ" ಎಂದು ಹೇಳಿದರು.

Unconditionally I Joined BJP Party Says Pramod Madhwaraj

"ನಾನು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷ ಕೂಡ ನನಗೆ ಹಲವಾರು ಕೊಡುಗೆಗಳನ್ನು ಕೊಟ್ಟಿದೆ. ಆದರೆ ಉಡುಪಿ ಜಿಲ್ಲೆಯ ಕಾಂಗ್ರೆಸ್‌ನ ಪರಿಸ್ಥಿತಿ ಕಳೆದ ಮೂರು ವರ್ಷಗಳಿಂದ ನನಗೆ ಹಿತಕರವಾಗಿಲ್ಲ. ನನಗೆ ಉಸಿರುಕಟ್ಟುವ ವಾತಾವರಣ ಇದೆ. ಪಕ್ಷದ ವರಿಷ್ಠರಿಗೆ ಹಲವು ಬಾರಿ ಹೇಳಿದಾಗಲೂ ಸಮಸ್ಯೆ ಬಗೆಹರಿಸುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಆದರೆ ಅದನ್ನು ಇನ್ನು ಸರಿಪಡಿಸದಿದ್ದಾಗ ಪಕ್ಷಕ್ಕೆ ರಾಜಿನಾಮೆ ಕೊಟ್ಟು ಬಿಜೆಪಿ ಸೇರಿದ್ದೇನೆ" ಎಂದರು.

ಮೋದಿ ಆಡಳಿತ ಮೆಚ್ಚಿದ್ದೇನೆ; "ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ. ಕೋವಿಡ್ ಪರಿಸ್ಥಿತಿಯನ್ನು ಅವರು ನಿಭಾಯಿಸಿದ ಕಾರ್ಯವೈಖರಿ ಮೆಚ್ಚುಗೆಯಾಗಿ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ" ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.

Unconditionally I Joined BJP Party Says Pramod Madhwaraj

"ಬಸವರಾಜ ಬೊಮ್ಮಾಯಿ ಸರಳ ಮತ್ತು ಜನಸಾಮಾನ್ಯರಿಗೆ ಹತ್ತಿರವಾದ ಆಡಳಿತ ಕಾರ್ಯವೈಖರಿಗಾಗಿ ಬಿಜೆಪಿ ಸೇರಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಬಿ. ಎಲ್. ಸಂತೋಷ್ ಅವರ ಮೇಲೆ ವಿಶ್ವಾಸವಿಟ್ಟು ನಾನು ಪಕ್ಷ ಸೇರಿದ್ದೇನೆ" ಎಂದು ತಿಳಿಸಿದರು.

ಪಕ್ಷಕ್ಕಾಗಿ ಕೆಲಸ ಮಾಡುವೆ; "2023 ಚುನಾವಣೆಯಲ್ಲಿ ಬಿಜೆಪಿಗೆ 150 ಸೀಟು ಗೆಲ್ಲಲು ನಾನು ನನ್ನ ಅಳಿಲುಸೇವೆಯನ್ನು ಮಾಡುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಪಕ್ಷ ಎಲ್ಲಿ ಕೆಲಸ ಮಾಡಲು ಹೇಳುತ್ತದೆಯೋ ಅಲ್ಲಿ ಹೋಗಿ ಕೆಲಸ ಮಾಡುತ್ತೇನೆ. ವಿಶೇಷವಾಗಿ ಮೀನುಗಾರರು ಇರುವಂತಹ ಕ್ಷೇತ್ರದಲ್ಲಿ ಹೋಗಿ ಕೆಲಸ ಮಾಡುತ್ತೇನೆ" ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.

Unconditionally I Joined BJP Party Says Pramod Madhwaraj

ಕಾಂಗ್ರೆಸ್‌ನಲ್ಲಿದ್ದಾಗ ಮೋದಿ ವಿರೋಧಿ ಹೇಳಿಕೆ‌ ನೀಡಿದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, "ಮಧ್ವರಾಜ್, 2018ರಲ್ಲಿ ಹೇಳಿದ ಮಾತಿಗೂ ನಾನು ಈಗ ತೆಗೆದುಕೊಂಡ ನಿರ್ಧಾರಕ್ಕೂ ಯಾವುದೇ ಸಂಬಂಧಗಳು ಇಲ್ಲ. ವಿರೋಧ ಪಕ್ಷದಲ್ಲಿರುವಾಗ ಆಡಳಿತ ಪಕ್ಷವನ್ನು ಟೀಕೆ ಮಾಡುವುದು ನಮ್ಮ ಕರ್ತವ್ಯ" ಎಂದರು.

"ಇಂದಿರಾ ಗಾಂಧಿ ವಿರುದ್ಧ ವೀರೇಂದ್ರ ಪಾಟೀಲ್ ಆರೋಪ ಮಾಡಿ, ನಿರಂತರವಾಗಿ ಟೀಕೆಗಳನ್ನು ಮಾಡಿದ್ದರು. ಎರಡೇ ವರ್ಷದಲ್ಲಿ ವೀರೇಂದ್ರ ಪಾಟೀಲ್ ಕಾಂಗ್ರೆಸ್ ಪಕ್ಷವನ್ನು ಸೇರಿ ಅಲ್ಲಿ ಮಂತ್ರಿಯಾಗುತ್ತಾರೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಆಡಳಿತ ಪಕ್ಷವನ್ನು ಮೆಚ್ಚಲು ಸಾಧ್ಯವೇ?. ಅಂದಿನ ವಿಡಿಯೋಗಳನ್ನು ಇಂದು ಹರಿಯಬಿಡುವುದು ಎಷ್ಟು ಸಮಂಜಸ?" ಎಂದು ಪ್ರಶ್ನಿಸಿದರು.

Recommended Video

Hardik Pandya ಮಗ ತೊಟ್ಟಿದ್ದು lucknow jersey | Oneindia Kannada

English summary
I will work for party to come power in 2023 assembly elections. Unconditionally I joined BJP said Pramod Madhwaraj former Udupi MLA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X