ಕೇಂದ್ರ ಬಜೆಟ್ ಸಾಮಾನ್ಯ ಜನರಲ್ಲಿ ವಿಶ್ವಾಸ ಮೂಡಿಸಿದೆ: ಕೋಟ ಶ್ರೀನಿವಾಸ
ಉಡುಪಿ, ಜನವರಿ 01: ಈ ಬಾರಿಯ ಕೇಂದ್ರ ಬಜೆಟ್ ದೇಶದ ಸಾಮಾನ್ಯ ಜನರಲ್ಲಿ ವಿಶ್ವಾಸ ಮೂಡಿಸಿದೆ, ಗ್ರಾಮೀಣಾಭಿವೃದ್ಧಿಗೆ ಒಂದು ಕಾಲು ಲಕ್ಷ ಕೋಟಿ ರೂ, ನೀಡಿರುವುದು ಐತಿಹಾಸಿಕ ದಾಖಲೆ ಎಂದು ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೇಂದ್ರ ಬಜೆಟ್ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವರು, ಆಯುಷ್ಮಾನ್ ಭಾರತ್ ಯೋಜನೆಯಡಿ 112 ಜಿಲ್ಲೆಯಲ್ಲಿ ಆಸ್ಪತ್ರೆ ತೆರೆಯಲಾಗುತ್ತಿದೆ, ಕಿಸಾನ್ ರೈಲು ಬಿಡುಗಡೆ ಮಾಡಿದ್ದು ಸ್ವಾಗತಾರ್ಹ ಎಂದರು.
ಕಾಶ್ಮೀರಕ್ಕೆ 37 ಸಾವಿರ ಕೋಟಿ ಮೀಸಲಿರಿಸಲಾಗಿದ್ದು, ಕಾಶ್ಮೀರದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಇದು ಅನುಕೂಲವಾಗಲಿದೆ. 370 ರದ್ದತಿಯಿಂದ ಜನರ ಮೇಲೆ ಆಗುವ ಪರಿಣಾಮಕ್ಕೆ ಅನುಕೂಲವಾಗಲಿದೆ. ಒಟ್ಟಾರೆ ಇದೊಂದು ದೂರಗಾಮಿ ಬಜೆಟ್ ಎಂದು ಬಣ್ಣಿಸಿದರು.

ನರೇಂದ್ರ ಮೋದಿಯವರ ಸರ್ಕಾರ ಜನಪರ ಬಜೆಟ್ ನೀಡಿದೆ. ದೇಶದ ಬರಗಾಲ ಪೀಡಿತ ಪ್ರದೇಶಗಳಲ್ಲಿ ನೀರಿನ ಮೂಲ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಬಜೆಟ್ ನಲ್ಲಿ ರಾಷ್ಟ್ರೀಯ ಭದ್ರತೆಗೆ ಒತ್ತುಕೊಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಪೂಜಾರಿ, ಸಿಎಂ ಯಡಿಯೂರಪ್ಪ ಅವರು ಕೇಂದ್ರ ನಾಯಕರ ಜೊತೆ ಸಮಾಲೋಚನೆ ಮಾಡುತ್ತಿದ್ದಾರೆ. ಅವರ ತೀರ್ಮಾನವನ್ನು ನಾವೆಲ್ಲಾ ಒಟ್ಟಾಗಿ, ಒಂದಾಗಿ ಸ್ವಾಗತ ಮಾಡುತ್ತೇವೆ ಎಂದರು.

""ಸುಭದ್ರ ಸರ್ಕಾರವೊಂದೇ ನಮ್ಮ ಮುಂದಿನ ಗುರಿ, ಸೋತವರಿಗೆ ಸ್ಥಾನಮಾನ ಕೊಡುವ ಬಗ್ಗೆ ಶ್ರೀನಿವಾಸ ಪೂಜಾರಿ ಏನು ಹೇಳೋಕೆ ಸಾಧ್ಯ? ಅದನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್, ಸಿಎಂ ಯಡಿಯೂರಪ್ಪ ತೀರ್ಮಾನ ಮಾಡ್ತಾರೆ. ಶೀಘ್ರವೇ ಎಲ್ಲಾ ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ'' ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications