ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಪರಿಕ್ಕರ್

ಉಡುಪಿ, ಡಿಸೆಂಬರ್. 26 : ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದು ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಬಳಿಕ ಮಾತನಾಡಿದ ಸಚಿವ ಮನೋಹರ್ ಪಾರಿಕ್ಕರ್, 'ಉಡುಪಿ ಮಠವು ಭಕ್ತಿಯ ಮಾರ್ಗ ಹಾಗೂ ಗೋಸರಂಕ್ಷಣೆಯ ಬಗ್ಗೆ ಉತ್ತಮವಾದ ಕೆಲಸ ನಿರ್ವಹಿಸುತ್ತಿದೆ. ಇಲ್ಲಿಗೆ ಬರಲು ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ. ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡಿದ್ದೇನೆ' ಎಂದು ಹೇಳಿದರು.

Union Defence Minister Manohar Parrikar visits Udupi Sri Krishna Mutt

ನೋಟು ರದ್ಧತಿಯು ಪ್ರಧಾನ ಮಂತ್ರಿಯವರ ಬಹಳ ಒಳ್ಳೆಯ ನಿರ್ಣಯವಾಗಿದ್ದು, ಎಲ್ಲರು ಇದನ್ನು ಬೆಂಬಲಿಸಿದ್ದಾರೆ. ಆದರೆ, ಇಷ್ಟ ಪಡದ ಕೆಲವರು ಮಾತ್ರ ಇದನ್ನು ವಿರೋಧಿಸುತ್ತಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ತಿಳಿಸಿದ್ದಾರೆ.

ಈ ವೇಳೆ ಪೇಜಾವರ ಶ್ರೀಗಳು ಮಾತನಾಡಿ, ದೇಶದ ಬಹಳ ದೊಡ್ಡ ಜವಾಬ್ದಾರಿಯಾಗಿರುವ ರಕ್ಷಣೆಯ ಹೊಣೆಯನ್ನು ಹೊಂದಿದ್ದಾರೆ. ಇವರು ಮಧ್ವ ಸಿದ್ಧಾಂತದ ಅನುಯಾಯಿಯಾಗಿದ್ದಾರೆ.

ಫೆಬ್ರವರಿ 6ರಂದು ನಡೆಯುವ ಮಧ್ವಾಚಾರ್ಯರ ಸಪ್ತ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸಚಿವ ಮನೋಹರ್ ಪರಿಕ್ಕರ್ ಒಪ್ಪಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+