ಉಡುಪಿ; ಬಹುಬೇಡಿಕೆಯ ರಸ್ತೆ ಯೋಜನೆಗೆ ಕೇಂದ್ರದ ಒಪ್ಪಿಗೆ

ಉಡುಪಿ, ಜೂನ್ 01; ತೀರ್ಥಹಳ್ಳಿ-ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಆದಿ ಉಡುಪಿಯಿಂದ ಮಲ್ಪೆ ತನಕ 4 ಪಥರ ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿವರೆಗೆ ದ್ವಿಪಥವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಒಟ್ಟು 350 ಕೋಟಿ ರೂ. ಅನುದಾನ ನೀಡಲಯ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಿದೆ.

ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಮಲ್ಪೆಯಿಂದ ಹೆಬ್ರಿವರೆಗೆ ಸಮಗ್ರ ಅಭಿವೃದ್ಧಿಯ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ 23/3/2021ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ನಿತಿನ್ ಗಡ್ಕರಿಗೆ ಸಲ್ಲಿಸಿದ್ದರು.

Union Govt Approved For Adi Udupi And Malpe National Highway 4 Lane Project

ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ಹೆದ್ದಾರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಹೆದ್ದಾರಿ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿದ್ದರು.

ಯೋಜನೆಗೆ ಅನುಮೋದನೆ ದೊರಕುವವರೆಗೆ ನಿರಂತರವಾಗಿ ಪ್ರಯತ್ನಿಸಿ ಶ್ರಮವಹಿಸಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಗೆ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+