ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಬಹುಬೇಡಿಕೆಯ ರಸ್ತೆ ಯೋಜನೆಗೆ ಕೇಂದ್ರದ ಒಪ್ಪಿಗೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 01; ತೀರ್ಥಹಳ್ಳಿ-ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಆದಿ ಉಡುಪಿಯಿಂದ ಮಲ್ಪೆ ತನಕ 4 ಪಥರ ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿವರೆಗೆ ದ್ವಿಪಥವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಒಟ್ಟು 350 ಕೋಟಿ ರೂ. ಅನುದಾನ ನೀಡಲಯ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಿದೆ.

ಅವೈಜ್ಞಾನಿಕ ಕಾಮಗಾರಿ: ಭಾರೀ ಮಳೆಗೆ ಮುಳುಗಿದ ಪಂಪ್‌ವೆಲ್ ಫ್ಲೈ ಓವರ್ ಸರ್ವೀಸ್ ರಸ್ತೆಅವೈಜ್ಞಾನಿಕ ಕಾಮಗಾರಿ: ಭಾರೀ ಮಳೆಗೆ ಮುಳುಗಿದ ಪಂಪ್‌ವೆಲ್ ಫ್ಲೈ ಓವರ್ ಸರ್ವೀಸ್ ರಸ್ತೆ

ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಮಲ್ಪೆಯಿಂದ ಹೆಬ್ರಿವರೆಗೆ ಸಮಗ್ರ ಅಭಿವೃದ್ಧಿಯ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ 23/3/2021ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವರಾದ ನಿತಿನ್ ಗಡ್ಕರಿಗೆ ಸಲ್ಲಿಸಿದ್ದರು.

ಕೋವಿಡ್ ಕೇರ್ ಸೆಂಟರ್ ಬೇಡ; ಆದಿವಾಸಿಗಳಿಂದ ರಸ್ತೆ ಬಂದ್ ಕೋವಿಡ್ ಕೇರ್ ಸೆಂಟರ್ ಬೇಡ; ಆದಿವಾಸಿಗಳಿಂದ ರಸ್ತೆ ಬಂದ್

Union Govt Approved For Adi Udupi And Malpe National Highway 4 Lane Project

ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ಹೆದ್ದಾರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಹೆದ್ದಾರಿ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿದ್ದರು.

ಮಡಿಕೇರಿ-ಮಂಗಳೂರು ಹೆದ್ದಾರಿಯ 2ನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಮಡಿಕೇರಿ-ಮಂಗಳೂರು ಹೆದ್ದಾರಿಯ 2ನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ

Recommended Video

Ind vs NZ Team India ಸಿದ್ಧತೆಯ ವಿಡಿಯೋ ವೈರಲ್ | Oneindia Kannada

ಯೋಜನೆಗೆ ಅನುಮೋದನೆ ದೊರಕುವವರೆಗೆ ನಿರಂತರವಾಗಿ ಪ್ರಯತ್ನಿಸಿ ಶ್ರಮವಹಿಸಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಗೆ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.

English summary
Union government approved for the Malpe and Adi Udupi national highway 4 lane project. Road will connect Malpe-Tirthahalli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X