ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ,ಕಾಂಗ್ರೆಸ್ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಿದೆ ಉಡುಪಿ ಚಿಕ್ಕಮಗಳೂರು ಕ್ಷೇತ್ರ

|
Google Oneindia Kannada News

ಮಂಗಳೂರು ಮಾರ್ಚ್ 30: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಕ್ಷೇತ್ರದಲ್ಲಿ ರಾಜಕೀಯ ಮುಖಂಡ ಆರೋಪ ಪ್ರತ್ಯಾರೋಪದ ಪರ್ವ ಆರಂಭಗೊಂಡಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಕ್ಷೇತ್ರದ ಜಾಗೃತ ಮತದಾರ ಪ್ರಭು ಕುತೂಹಲ ದಿಂದ ನೋಡುತ್ತಿದ್ದಾನೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದೆ.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಡುಪಿ ಶಾಸಕ ರಘುಪತಿ ಭಟ್ , ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಮೈತ್ರಿ ಗೆಲುವು ಸುಲಭವಲ್ಲ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಮೈತ್ರಿ ಗೆಲುವು ಸುಲಭವಲ್ಲ

ಕಾಂಗ್ರೆಸ್ ನಾಯಕರಾಗಿ ಜೆಡಿಎಸ್ ನಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒಬ್ಬ ಸ್ಚಾರ್ಥ ರಾಜಕಾರಣಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

verbal battle started between BJP and Congress in Udupi chikkamagaluru constituency

ಮಧ್ವರಾಜ್ ಅವರಿ ಗೆ ಅಧಿಕಾರದ ದಾಹ ಜಾಸ್ತಿಯಾಗಿದೆ. ಮಧ್ವರಾಜ್ ಅವರ ಈ ವರ್ತನೆ ಗಳಿಂದಾಗಿ ಕ್ಷೇತ್ರದ ಕಾಂಗ್ರೆಸ್ ನ ನೈಜ ಕಾರ್ಯಕರ್ತರಿಗೆ ಬೇಸರವಾಗಿದೆ. ಉಡುಪಿಯಲ್ಲಿ ಜೆಡಿಎಸ್ ನ ಒಬ್ಬ ಪಂಚಾಯತ್ ಸದಸ್ಯರೂ ಇಲ್ಲ. ಆದರೂ ಜೆಡಿಎಸ್ ಗೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟು ಕೊಟ್ಟಿರುವುದಕ್ಕೆ ನೈಜ ಕಾಂಗ್ರೆಸ್ ಓಟುಗಳು ಬಿಜೆಪಿಗೆ ಬರಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?

ಮಧ್ವರಾಜ್ ಅವರ ಮತದಾರರು ಗೊಂದಲದಲ್ಲಿದ್ದಾರೆ. ಚುನಾವಣೆ ನಂತರ ಪ್ರಮೋದ್ ಏನು ಮಾಡ್ತಾರೆ. ಅದೇ ಶಾಲು ಹಾಕಿಕೊಂಡು ಓಡಾಡುತ್ತಾರಾ? ಎಂದು ಪ್ರಶ್ನಿಸಿದ ಅವರು ಫಲಿತಾಂಶ ಬಂದು 24 ಗಂಟೆಯೂ ಅವರು ಅ ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದರು.

ಉಡುಪಿ-ಚಿಕ್ಕಮಗಳೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಕಣಕ್ಕೆ ಉಡುಪಿ-ಚಿಕ್ಕಮಗಳೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಕಣಕ್ಕೆ

ಕರಾವಳಿ ಮತದಾರರು ತಿಳುವಳಿಕೆ ಇಲ್ಲ ಎಂದು ಹೇಳಿದವರಿಗೆ ಕರಾವಳಿ ಜನ ಈ ಬಾರಿ ಸರಿಯಾದ ಬುದ್ಧಿ ಕಲಿಸುತ್ತಾರೆ. ಈ ಕೂಡಲೇ ಮುಖ್ಯಮಂತ್ರಿ ಕುಮಾರ ಸ್ವಾಮಿ ಜನರಲ್ಲಿ ಕ್ಷಮೆಯಾಚಿಸಬೇಕು.

ಕ್ಷಮೆ ಕೇಳಿಸುವ ಜವಾಬ್ದಾರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮೇಲಿದೆ ಎಂದು ಅವರು ಹೇಳಿದರು.ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದರು. ಶೋಭಾರವರು ತಮ್ಮ ಐದು ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ವಾಸ್ತವ್ಯ ಮಾಡದೆ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು .

ದೇಣಿಗೆ ಸಂಗ್ರಹಕ್ಕೆ ಬೀದಿಗಿಳಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ದೇಣಿಗೆ ಸಂಗ್ರಹಕ್ಕೆ ಬೀದಿಗಿಳಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ

ಶೋಭಾ ಕರಂದ್ಲಾಜೆ ಜನರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧ ಸಿಡಿದೆದ್ದಿರುವುದು ಅವರ ವೈಫ‌ಲ್ಯವನ್ನು ತೋರಿಸುತ್ತದೆ . ಇದು ಕ್ಷೇತ್ರದಲ್ಲಿ ಕಾಂಗ್ರೆಸ್ ,ಜೆಡಿಎಸ್ ಮೈತ್ರಿ ಗಲುವಿಗೆ ವರದಾನ ವಾಗಲಿದೆ ಎಂದು ಅವರು ಹೇಳಿದರು .

English summary
BJP and Congress kick started campaign in Udupi Chikkamagaluru Lok sabha constituency. There is a straight between BJP and congress . Verbal battle started in constituency,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X