ಸಾಮಾಜಿಕ ಜಾಲತಾಣದಲ್ಲಿ ಅನುಪಮಾ ಶೆಣೈ ಹೇಳಿಕೆ ವಿಡಿಯೋ ವೈರಲ್
ಉಡುಪಿ, ಮೇ 8 : ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಕಾಂಗ್ರೆಸ್ ಅಭ್ಯರ್ಥಿ ಅನುಪಮಾ ಶೆಣೈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನುಪಮಾ ಶೆಣೈ ಅವರು ವೀಡಿಯೋ ತುಣುಕೊಂದರಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಕಾಂಗ್ರೆಸ್ ಬೆಂಬಲಿಗ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಇವಿಎಂ ಬಗ್ಗೆ ಕಾಂಗ್ರೆಸ್ ಗೆ ಗೊಂದಲವಿರದು. ಯಾಕೆಂದರೆ ಮುಖ್ಯ ಚುನಾವಣಾಧಿಕಾರಿಯವರೇ ಕಾಂಗ್ರೆಸ್ ಬೆಂಬಲಿಗರಾಗಿದ್ದಾರೆ. ಆದ್ದರಿಂದ ಈ ಹಿಂದೆ ಕಾಂಗ್ರೆಸ್ ಇವಿಎಂ ಬಗ್ಗೆ ವ್ಯಕ್ತಪಡಿಸಿದ್ದ ಅನುಮಾನ ರಾಜ್ಯದಲ್ಲಿ ಕಾಣಸಿಗದು.
ರಾಜ್ಯದಲ್ಲಿ ಚುನಾವಣಾಧಿಕಾರಿಯವರೇ ಕಾಂಗ್ರೆಸ್ ಆಡಳಿತಕ್ಕೆ ಬರುವಂತಾಗಲು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ಸೇತರ ಪಕ್ಷದ ದೂರನ್ನು ಸಂಜೀವ್ ಕುಮಾರ್ ವಿಲೇವಾರಿ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ಖುದ್ದು, ನಾನೇ ಇಬ್ಬರು ಅಧಿಕಾರಿಗಳು ಕಾಂಗ್ರೆಸ್ ಪರ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ದಾಖಲೆ ಸಮೇತ ದೂರು ನೀಡಿದ್ದೆ.

ಆದರೆ ಅದನ್ನು ಇದುವರೆಗೂ ವಿಲೇವಾರಿ ನಡೆಸಿಲ್ಲ ಎಂದು ದೂರಿದ್ದಾರೆ. ಸದ್ಯ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ಸೇತರ ಪಕ್ಷದ ನಾಯಕರಲ್ಲಿ ಆತಂಕ ಹಾಗೂ ಚರ್ಚೆಯನ್ನು ಹುಟ್ಟುಹಾಕಿದೆ.












Click it and Unblock the Notifications