ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ ನಲ್ಲಿ ಮುಖ್ಯಮಂತ್ರಿಯಿಂದ ಕರಾವಳಿ ನಿರ್ಲಕ್ಷ್ಯ: ಸೊರಕೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 05: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2020-21 ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಎತ್ತಿನಹೊಳೆ ಯೋಜನೆಗೆ ನಳೀನ್ ಕುಮಾರ್ ಕಟೀಲ್ ವಿರೋಧಿಸಿದ್ದರು, ಆದರೆ ಸಿಎಂ ಯಡಿಯೂರಪ್ಪನವರು ಬಜೆಟ್ 1,500 ಕೋಟಿ ರುಪಾಯಿ ಬಿಡುಗಡೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸೆಡ್ಡು ಹೊಡೆದಿದ್ದಾರೆ ಎಂದರು.

ಕರ್ನಾಟಕ ಬಜೆಟ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಕರ್ನಾಟಕ ಬಜೆಟ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ದಕ್ಷಿಣ ಕನ್ನಡದಲ್ಲಿ ಕಟೀಲ್ ಅವರ ನೇತೃತ್ವದಲ್ಲೇ ಹೋರಾಟಗಳು ನಡೆದಿದ್ದವು, ಈಗ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಕೇಂದ್ರದ ಅನುದಾನ ಬಂದಿಲ್ಲವೆಂದು ಸಿಎಂ ಬಜೆಟ್ ಭಾಷಣದಲ್ಲೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

Vinaykumar Sorake Said Coastal Area Neglect By Chief Minister In Budget

ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮಗಳನ್ನು ಈ ಬಜೆಟ್ ನಲ್ಲಿ ಹೇಳಿಲ್ಲ, ಆರ್ಥಿಕ ಚೇತರಿಕೆಗೆ ಟಾನಿಕ್ ಕೊಡದ ಬಜೆಟ್ ಇದಾಗಿದ್ದು, ಕರಾವಳಿ ಭಾಗದ ಸಮಸ್ಯೆಯನ್ನು ಸಿಎಂ ಉಲ್ಲೇಖ ಮಾಡಿಲ್ಲವೆಂದರು.

ಕರ್ನಾಟಕ ಬಜೆಟ್; ಉತ್ತರ ಕರ್ನಾಟಕಕ್ಕೆ ಯಡಿಯೂರಪ್ಪ ಕೊಡುಗೆಕರ್ನಾಟಕ ಬಜೆಟ್; ಉತ್ತರ ಕರ್ನಾಟಕಕ್ಕೆ ಯಡಿಯೂರಪ್ಪ ಕೊಡುಗೆ

ಉದ್ಯೋಗ ಸೃಷ್ಟಿಯ ಬಗ್ಗೆ ಯಾವುದೇ ಕಾರ್ಯಕ್ರಮ ಇಲ್ಲ, ಯಡಿಯೂರಪ್ಪ ಬಜೆಟ್ ಪುನರುಜ್ಜೀವನ ಕೊಡುವಲ್ಲಿ ವಿಫಲವಾಗಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿದರು.

English summary
Former minister Vinay Kumar Sorake said Chief Minister BS Yediyurappa presented the budget for 2020-21 which is a very disappointing budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X